Wednesday, October 5, 2022

ಭಾರತಕ್ಕೆನುಸುಳಲು ಉಗ್ರರ ಯತ್ನ: ಓರ್ವ ಭಯೋತ್ಪಾದಕ ಗುಂಡಿಗೆ ಬಲಿ

Follow Us

Newsics.com

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಉಗ್ರರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಲಾಗಿದೆ. ಭಾರತದ ಗಡಿಯಲ್ಲಿ ಸಂಶಾಯಾಸ್ಪದ ರೀತಿಯಲ್ಲಿ ಕಂಡು ಬಂದ ವ್ಯಕ್ತಿಗಳನ್ನು ತಡೆಯಲು  ಭದ್ರತಾಪಡೆ ಮುಂದಾಯಿತು. ಈ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದರು

ಭಾರತದ ಯೋಧರು ಇದಕ್ಕೆ ಗುಂಡಿನಿಂದಲೇ ಪ್ರತ್ಯುತ್ತರ ನೀಡಿದರು.  ಜಮ್ಮು ಕಾಶ್ಮೀರದ ಮಚಿಲ್ ವಲಯದಲ್ಲಿ ಈ ಘಟನೆ ಸಂಭವಿಸಿದೆ.  ಹತನಾದ ಉಗ್ರನ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ಎ ಕೆ ರೈಫಲ್ಸ್ ಕೂಡ ಸೇರಿದೆ.

ಇತರ ಉಗ್ರರಿಗಾಗಿ ಶೋಧ ಕಾರ್ಯ ನಡೆದಿದೆ. ಗುಂಡಿನ ಚಕಮಕಿ ವೇಳೆ ಈ ಉಗ್ರರು ಪಾಕ್ ಕಡೆ ಪಲಾಯನ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಜಮ್ಮು ಕಾಶ್ಮೀರದಲ್ಲಿ ಇತ್ತೀಚಿನ ದಿನಳಲ್ಲಿ ಉಗ್ರರ ವಿರುದ್ದದ ಕಾರ್ಯಾಚರಣೆಯನ್ನು ಸೇನೆ ತೀವ್ರಗೊಳಿಸಿದೆ. ಇದರಿಂದ ಭಯಗೊಂಡಿರುವ ಉಗ್ರರು, ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿ ದಾಳಿ ನಡೆಸುವ ಹೊಸ ತಂತ್ರದ ಮೊರೆ ಹೋಗಿದ್ದಾರೆ.

ಉಗ್ರರಿಗೆ ಮಾರಕ ವಸ್ತುಗಳ ಪೂರೈಕೆಗಾಗಿ ಪಾಕಿಸ್ತಾನ ಡ್ರೋಣ್ ಬಳಸುತ್ತಿದೆ ಎಂಬ ವರದಿ ಹಿನ್ನೆಲೆಯಲ್ಲಿ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

96 ಗಂಟೆಗಳ ಕಾರ್ಯಾಚರಣೆ ವಿಫಲ: ಹಾರಿ ಹೋಯ್ತು ಕೊಳವೆ ಬಾವಿಗೆ ಬಿದ್ದ ಮಗುವಿನ ಪ್ರಾಣ

ಮತ್ತಷ್ಟು ಸುದ್ದಿಗಳು

vertical

Latest News

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು....

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...

ಭೀಕರ ಅಪಘಾತ- 10 ಮಂದಿ ಸಾವು, 7 ಮಂದಿಗೆ ಗಾಯ

newsics.com ವಡೋದರ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ....
- Advertisement -
error: Content is protected !!