ನವದೆಹಲಿ: ಆಗಸ್ಟ್ 31 ರವರೆಗೂ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಯಾನ ನಿರ್ಬಂಧ ಮುಂದುವರಿಯಲಿದೆ.
ಆದರೆ ಕಾರ್ಗೊ (ಸರಕು ಮತ್ತು ಸೇವೆ) ಹಾಗೂ ವಾಣಿಜ್ಯ ಸೇವೆಗಳ ವಿಮಾನಗಳ ಹಾರಾಟದಲ್ಲಿ ಯಾವುದೇ ವ್ಯತ್ಯಯ ಇಲ್ಲ. ಈ ಬಗ್ಗೆ ಶುಕ್ರವಾರ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಸುತ್ತೋಲೆ ಹೊರಡಿಸಿದೆ.
ದೇಶಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ, ನಾಗರಿಕ ವಿಮಾನಯಾನ ಸಚಿವಾಲಯವು ಅಂತಾರಾಷ್ಟ್ರೀಯ ವಿಮಾನಗಳ ಮೇಲಿನ ನಿಷೇಧವನ್ನು ಜುಲೈ 31ರವರೆಗೆ ವಿಸ್ತರಿಸಿತ್ತು. ಜಗತ್ತಿನಾದ್ಯಂತ ಕೋವಿಡ್ ಪ್ರಕರಣಗಳಲ್ಲಿ ಇಳಿಕೆಯಾಗದಿರುವುದರಿಂದ ಮತ್ತೆ ಆಗಸ್ಟ್ 31ರವರೆಗೂ ವಿಸ್ತರಿಸಲಾಗಿದೆ.
ಪ್ರಸ್ತುತ, ದೇಶೀಯ ವೈಮಾನಿಕ ಸೇವೆ ಮೇ 25ರಂದು ಪುನಾರಂಭಗೊಂಡಿದೆ. ವಂದೇ ಭಾರತ್ ಮಿಷನ್ ಅಡಿ ಏರ್ ಇಂಡಿಯಾ ಮತ್ತು ಕೆಲ ಖಾಸಗಿ ವೈಮಾನಿಕ ಸಂಸ್ಥೆಗಳು ಕೆಲವೊಂದು ವಿಮಾನ ಸೇವೆಯನ್ನು ಒದಗಿಸುತ್ತಿವೆ.
ಆ.31ರವರೆಗೂ ಅಂತಾರಾಷ್ಟ್ರೀಯ ವಿಮಾನಯಾನ ನಿರ್ಬಂಧ
Follow Us