Monday, April 12, 2021

ನಟಿ ಶಮ್ನಾ ಕಾಸಿಂ ಅಪಹರಣಕ್ಕೆ ನಡೆದಿತ್ತು ಸಂಚು

ತಿರುವನಂತಪುರಂ: ನಟಿ ಶಮ್ನಾ ಕಾಸಿಂ ಬ್ಲಾಕ್ ಮೇಲ್ ಯತ್ನ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ  ಮುಂದುವರಿದಿದೆ. ಈ ಮಧ್ಯೆ ಆರೋಪಿಗಳ ವಿಚಾರಣೆ ಸಂದರ್ಭದಲ್ಲಿ ಕೆಲವು ಸ್ಫೋಟಕ ಮಾಹಿತಿಗಳು ಹೊರಬಂದಿವೆ. ನಟಿ ಶಮ್ನಾ ಕಾಸಿಂ ಅವರನ್ನು ಅಪಹರಿಸಿ ಹಣ ಸುಲಿಗೆ ಮಾಡಲು ಆರೋಪಿಗಳು ಸಂಚು ಹೂಡಿದ್ದರು ಎಂಬುದು ಇದೀಗ ಬಹಿರಂಗವಾಗಿದೆ. ಆದರೆ ಶಮ್ನಾ ಪೊಲೀಸರಿಗೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ಈ ಸಂಚು ವಿಫಲವಾಗಿತ್ತು. ಈ ಮಧ್ಯೆ ಕೊಚ್ಚಿಗೆ ಆಗಮಿಸಿದ ಶಮ್ನಾ , ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. ಮದುವೆಯ ಆಲೋಚನೆಯೊಂದಿಗೆ ಶಮ್ನಾ ಕಾಸಿಂ ಮನೆಯ ಸದಸ್ಯರ ಜತೆ ಮಾತುಕತೆ ನಡೆಸಿದ್ದ ಆರೋಪಿಯೊಬ್ಬ ಬಳಿಕ ಅವರನ್ನು ಬ್ಲಾಕ್ ಮೇಲ್ ಮಾಡಲು ಯತ್ನ ನಡೆಸಿದ್ದ ಎಂದು ಆರೋಪಿಸಲಾಗಿದೆ. ಮೂಲತ: ಕೇರಳದ ಕಣ್ಣೂರು ಜಿಲ್ಲೆಯವರಾಗಿರುವ ಶಮ್ನಾ ಕಾಸಿಂ ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಜನಪ್ರಿಯ ನಟಿಯಾಗಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!