Sunday, July 3, 2022

ನಟ ಸುಶಾಂತ್ ಸಿಂಗ್ ಸಾವಿನ ತನಿಖೆ ಸರಿ ಇಲ್ಲವೆಂದ ಅಮೃತಾ ಫಡ್ನವೀಸ್

Follow Us

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ತನಿಖೆ ಕುರಿತಂತೆ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಮಾಡಿರುವ ಟ್ವೀಟ್ ಭಾರೀ ವಿವಾದ ಸೃಷ್ಟಿಸಿದೆ.
ಸುಶಾಂತ್ ಸಿಂಗ್ ರಜ್ಪೂತ್ ಅವರ ಪ್ರಕರಣವನ್ನು ಮುಂಬೈ ಪೊಲೀಸರು ನಿರ್ವಹಣೆ ಮಾಡುತ್ತಿರುವ ರೀತಿ ಗಮನಿಸಿದರೆ ಮುಂಬೈ ತನ್ನ ಮಾನವೀಯತೆ ಕಳೆದುಕೊಂಡಿದ್ದು ಜೀವಿಸುವುದಕ್ಕೆ ಸುರಕ್ಷಿತವಾಗಿಲ್ಲ ಎಂದು ನನಗನ್ನಿಸುತ್ತಿದೆ ಎಂದು ಅಮೃತಾ ಫಡ್ನವೀಸ್ ಟ್ವೀಟ್ ಮಾಡಿದ್ದಾರೆ.
ಈ ಟ್ವೀಟ್ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಶಿವಸೇನೆಯ ನಾಯಕರಿಂದ ಟೀಕೆಗೆ ಗುರಿಯಾಗಿದೆ.
ಶಿವಸೇನೆಯ ರಾಜ್ಯಸಭಾ ಸಂಸದರಾದ ಪ್ರಿಯಾಂಕ ಚತುರ್ವೇದಿ ಟ್ವಿಟರ್’ನಲ್ಲಿ ಅಮೃತಾ ಫಡ್ನವೀಸ್ ಟ್ವೀಟ್’ಗೆ ಪ್ರತಿಕ್ರಿಯೆ ನೀಡಿದ್ದು, ಮುಂಬೈ ಪೊಲೀಸ್ ಭದ್ರತೆ ಹಾಗೂ ಕಾರಿನಲ್ಲೇ ಸುತ್ತುತ್ತಾರೆ ಎಂದು ಟೀಕಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!