Wednesday, October 5, 2022

ಮುಂದಿನ ಏಪ್ರಿಲ್‌-ಮೇನಲ್ಲಿ ಐಪಿಎಲ್‌

Follow Us

newsics.com
ನವದೆಹಲಿ: 2021ರ ಐಪಿಎಲ್‌ ಏಪ್ರಿಲ್‌-ಮೇನಲ್ಲಿ ಭಾರತದ ಆತಿಥ್ಯದಲ್ಲೇ ನಡೆಯಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಹೇಳಿದ್ದಾರೆ.
13ನೇ ಐಪಿಎಲ್‌ ಪಂದ್ಯಾವಳಿ ಈಗ ಮುಕ್ತಾಯದ ಹಂತದಲ್ಲೆ ಕ್ರಿಕೆಟ್ ಅಭಿಮಾನಿಗಳಿಗೆ ಗಂಗೂಲಿ ಸಿಹಿಸುದ್ದಿ ನೀಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, 2021ರ ಐಪಿಎಲ್‌ ಎಪ್ರಿಲ್‌-ಮೇ ತಿಂಗಳಲ್ಲಿ 14 ನೇ ಐಪಿಎಲ್ ಪಂದ್ಯಾವಳಿ ಭಾರತದ ಆತಿಥ್ಯದಲ್ಲೇ ನಡೆಯಲಿದೆ. ಒಂದು ವೇಳೆ ಭಾರತದಲ್ಲಿ ಐಪಿಎಲ್ ನಡೆಸಲು ಸಾಧ್ಯವಾಗದಿದ್ದರೆ ಯುಎಇಯನ್ನು ಏಕೈಕ ಬದಲಿ ತಾಣವಾಗಿ ಇರಿಸಿಕೊಳ್ಳಲಾಗುವುದು ಎಂದು ಗಂಗೂಲಿ ಮಾಹಿತಿ ನೀಡಿದ್ದಾರೆ. ಮುಂದಿನ ಒಂದೆರಡು ವರ್ಷಗಳಲ್ಲಿ ವನಿತಾ ಐಪಿಎಲ್‌ ಪಂದ್ಯಾವಳಿಯನ್ನೂ ಆಯೋಜಿಸಲಾಗುವುದು ಎಂದು ಗಂಗೂಲಿ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು....

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...

ಭೀಕರ ಅಪಘಾತ- 10 ಮಂದಿ ಸಾವು, 7 ಮಂದಿಗೆ ಗಾಯ

newsics.com ವಡೋದರ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ....
- Advertisement -
error: Content is protected !!