Saturday, April 17, 2021

ಭಾರತ- ಚೀನಾ ಗಡಿ ಸಂಘರ್ಷ: ಕಾಂಗ್ರೆಸ್ ವಿರುದ್ಧ ನಡ್ಡಾ ಕಿಡಿ ಕಿಡಿ

ನವದೆಹಲಿ: ಭಾರತ- ಚೀನಾ ಗಡಿ ಸಂಘರ್ಷದ ಕುರಿತು ಕಾಂಗ್ರೆಸ್ ತಳೆದಿರುವ ನಿಲುವಿಗೆ ಬಿಜೆಪಿ  ರಾಷ್ಟ್ರೀಯ ಅಧ್ಯಕ್ಷ ಜೆ ಪಿ. ನಡ್ಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಹೆಸರು  ಪ್ರಸ್ತಾಪಿಸದೆ ಅವರು ಟ್ವಿಟರ್ ನಲ್ಲಿ ವಾಗ್ದಾಳಿ ನಡೆಸಿದ್ದಾರೆ. ಒಂದು ವಂಶದ ದುರಾಡಳಿತದಿಂದಾಗಿ ಭಾರತ ಸಾವಿರಾರು ಚದರ ಕಿಲೋ ಮೀಟರ್  ಭೂಮಿಯನ್ನು ಕಳೆದುಕೊಳ್ಳಬೇಕಾಯಿತು. ಸಿಯಾಚಿನ್  ಹೆಚ್ಚು ಕಮ್ಮಿ ನಮ್ಮ ಕೈ ತಪ್ಪಿ ಹೋಗಿತ್ತು. ಇದೀಗ ಭಾರತದ ಜನರು ಆ ವಂಶವನ್ನು ತಿರಸ್ಕರಿಸಿದ್ದಾರೆ. ಇದರಲ್ಲಿ ಅಚ್ಚರಿ ಕೂಡ ಇಲ್ಲ. ಎಂದು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಟೀಕಾ ಪ್ರಹಾರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬಿಜಿಪಿ ಕೂಡ ಇದನ್ನು ರಾಜಕೀಯವಾಗಿ ಎದುರಿಸುವ ಸಿದ್ದತೆ ಮಾಡಿದೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!