ನವದೆಹಲಿ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ ಪಿ ನಡ್ಡಾ ಇಂದು ಘೋಷಣೆಯಾಗುವ ಸಾಧ್ಯತೆಯಿದೆ. ಪಕ್ಷದ ನೂತನ ಅಧ್ಯಕ್ಷರಾಗಿ ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯೇ ಹೆಚ್ಚಾಗಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಇತರ ಹಿರಿಯ ನಾಯಕರು ಈ ಸಂಬಂಧ ಇಂದು ಅಧ್ಯಕ್ಷ ಪದವಿಗೆ ನಡ್ಡಾ ಅವರ ಹೆಸರನ್ನು ಸೂಚಿಸಲಿದ್ದಾರೆ. ಬುಧವಾರ ನಡ್ಡಾ ಅಧಿಕೃತವಾಗಿ ಪಕ್ಷದ ಅಧ್ಯಕ್ಷ ಸ್ಛಾನ ಅಲಂಕರಿಸಲಿದ್ದಾರೆ ಎಂದು ವರದಿಯಾಗಿದೆ.