Wednesday, November 30, 2022

ಟೈಪ್ 2 ಮಧುಮೇಹಿಗಳಿಗೆ ಹಲಸಿನಕಾಯಿ ಹಿಟ್ಟು ಮದ್ದು!

Follow Us

newsics.com

ಕೊಚ್ಚಿ(ಕೇರಳ): ಚೆನ್ನಾಗಿ ಬೆಳೆದ ಹಲಸಿನ ಕಾಯಿಯ ಹಿಟ್ಟು ಟೈಪ್ 2 ಮಧುಮೇಹ ನಿಯಂತ್ರಣಕ್ಕೆ ನೆರವಾಗುತ್ತದೆ ಎಂದು ಅಧ್ಯಯನವೊಂದು ಅಭಿಪ್ರಾಯಪಟ್ಟಿದೆ.

ನಿತ್ಯ ಊಟದ ಜತೆ ಒಂದು ಚಮಚ ಅಕ್ಕಿ ಅಥವಾ ಗೋಧಿ ಹಿಟ್ಟಿನ ಜತೆಗೆ ಹಲಸಿನ ಹಿಟ್ಟನ್ನು ಬಳಸಿದರೆ ಟೈಪ್ 2 ಡಯಾಬಿಟಿಸ್ ರೋಗಿಗಳಲ್ಲಿ ಪ್ಲಾಸ್ಮಾ ಗ್ಲೂಕೋಸ್ ಮಟ್ಟ ಕಡಿಮೆಯಾಗುತ್ತದೆ ಎಂದು ಈ ಅಧ್ಯಯನ ತಿಳಿಸಿದೆ.

ಎ.ಗೋಪಾಲ್ ರಾವ್, ಕೆ. ಸುನಿಲ್ ನಾಯಕ್, ಎ.ಜಿ. ಉನ್ನಿಕೃಷ್ಣನ್ ಮತ್ತು ಜೇಮ್ಸ್ ಜೋಸೆಫ್ ಅವರು ಈ ಅಧ್ಯಯನ ನಡೆಸಿದ್ದು, ಈ ಕುರಿತಾದ ವರದಿ ‘ನೇಚರ್’ ಜರ್ನಲ್‌ನಲ್ಲಿ ಪ್ರಕಟವಾಗಿದೆ.

ಹಲಸಿನ ಕಾಯಿ ಹಿಟ್ಟಿನೊಂದಿಗೆ ತಯಾರಿಸಿದ ಪೂರಕ ಆಹಾರವನ್ನು ಟೈಪ್ 2 ಮಧುಮೇಹ ರೋಗಿಗಳಿಗೆ ನೀಡಿದಾಗ 12ನೇ ವಾರದಲ್ಲಿ ಗ್ಲೈಕೋಸೈಲೇಟೆಡ್ ಹಿಮೋಗ್ಲೋಬಿನ್ (ಎಚ್‌ಬಿಎ1ಸಿ) ಸರಾಸರಿ ಮಟ್ಟವು ಗಣನೀಯವಾಗಿ ಕಡಿಮೆಯಾಗಿರುವುದು ಕಂಡುಬಂದಿದೆ ಎಂದು ಈ ಅಧ್ಯಯನ ಹೇಳಿದೆ. ಅಮೆಜಾನ್‌ನಲ್ಲಿ ಹಲಸಿನ ಹಿಟ್ಟು ಲಭ್ಯವಿದೆ ಎಂದು ಅಧ್ಯಯನ‌ ತಂಡದ ಜೇಮ್ಸ್ ಜೋಸೆಫ್ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!