Tuesday, April 13, 2021

ಕೊಚ್ಚಿಗೆ ಆಗಮಿಸಲಿದೆ ಜಲಾಶ್ವ ಹಡಗು

ಕೊಚ್ಚಿ:  ಮಾಲ್ಡೀವ್ಸ್ ನಿಂದ  588  ಪ್ರಯಾಣಿಕರನ್ನು ಹೊತ್ತು ಜಲಾಶ್ವ ಹಡಗು ಇಂದು ಕೊಚ್ಚಿಗೆ ಆಗಮಿಸಲಿದೆ. ಮುಂಜಾನೆ ಹತ್ತು ಗಂಟೆ ಹೊತ್ತಿಗೆ ಜಲಾಶ್ವ ಕೊಚ್ಚಿ ಬಂದರು ತಲುಪುವ ಸಾಧ್ಯತೆಯಿದೆ. ಕೊರೋನಾ ಹಿನ್ನೆಲೆಯಲ್ಲಿ ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಕರೆ ತರುವ ಸಮುದ್ರ ಸೇತು ಯೋಜನೆಯಡಿ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ. ಎರಡನೆ ಬಾರಿ ಜಲಾಶ್ವ  ಭಾರತೀಯರನ್ನು ಕರೆ ತರುತ್ತಿದೆ.  ಕೊಚ್ಚಿ ಬಂದರಿನಲ್ಲಿ ಪ್ರಯಾಣಿಕರ ವೈದ್ಯಕೀಯ ತಪಾಸಣೆಗೆ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ. ವಿಮಾನ ನಿಲ್ದಾಣದಲ್ಲಿ  ಅನುಸರಿಸಲಾಗುತ್ತಿರುವ ಕೊರೋನಾ ಪರೀಕ್ಷಾ ಮಾದರಿಯನ್ನು ಇಲ್ಲಿ ಅನುಸರಿಸಲಾಗುತ್ತಿದೆ. ಮಾಲ್ಡೀವ್ಸ್ ಗೆ ಭಾರತ ಇದೇ ಹಡಗಿನ ಮೂಲಕ ಪರಿಹಾರ ಸಾಮಾಗ್ರಿಗಳನ್ನು ಕಳುಹಿಸಿಕೊಟ್ಟಿತ್ತು.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!