Newsics.com
ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ ಮುಂದಿನ ವರ್ಷ ಜನವರಿ 31ರಂದು ನಡೆಯಲಿದೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ಈ ವಿಷಯ ತಿಳಿಸಿದ್ದಾರೆ.
ದೇಶದ 135 ನಗರಗಳಲ್ಲಿ ಪರೀಕ್ಷೆ ನಡೆಯಲಿದೆ. ಕೊರೋನಾ ಮಾರ್ಗ ಸೂಚಿ ಪಾಲಿಸಿ ಪರೀಕ್ಷೆ ನಡೆಯಲಿದೆ ಎಂದು ಸಚಿವ ಪೊಖ್ರಿಯಾಲ್ ತಿಳಿಸಿದ್ದಾರೆ.
ಈ ಹಿಂದೆ ಜುಲೈ 5ರಂದು ಈ ಪರೀಕ್ಷೆ ನಿಗದಿಯಾಗಿತ್ತು. 112 ನಗರಗಳಲ್ಲಿ ಅಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು.