Thursday, August 18, 2022

ನಟಿ ಕಂಗನಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಜಾವೇದ್ ಅಖ್ತರ್

Follow Us

newsics.com
ಮುಂಬೈ: ತಮ್ಮ ಘನತೆಗೆ ನಟಿ ಕಂಗನಾ ರಣಾವತ್ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಕವಿ ಹಾಗೂ ಸಾಹಿತಿ ಜಾವೇದ್ ಅಖ್ತರ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ ಕಂಗನಾ ತನ್ನ ವಿರುದ್ಧ ಹುರುಳಿಲ್ಲದ ಆರೋಪ ಮಾಡಿ, ಘನತೆಗೆ ಧಕ್ಕೆ ತಂದಿದ್ದಾರೆ ಎಂದು ಜಾವೇದ್ ಅಖ್ತರ್ ಮುಂಬೈ ನ್ಯಾಯಾಲಯದಲ್ಲಿ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಪಶ್ಚಿಮ ಮುಂಬೈನ ಅಂಧೇರಿಯಲ್ಲಿರುವ ಮೆಟ್ರೋ ಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ಸಲ್ಲಿಸಿರುವ ಮೊಕದ್ದಮೆಯಲ್ಲಿ ಜಾವೇದ್ ಅಖ್ತರ್ ಅವರು ಕಂಗನಾ ರಣಾವತ್ ವಿರುದ್ಧ ಮಾನನಷ್ಟಕ್ಕಾಗಿ ಕ್ರಮ ಕೈಗೊಳ್ಳಬೇಕೆಂದು ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಸುದ್ದಿಗಳು

vertical

Latest News

ಮಸೀದಿಯಲ್ಲಿ ಬಾಂಬ್ ಸ್ಫೋಟ: 21 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

newsics.com ಕಾಬೂಲ್‌(ಅಫ್ಘಾನಿಸ್ತಾನ): ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದು, 21 ಜನ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಾಬೂಲ್‌ನ ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ...

ರಾಜ್ಯದಲ್ಲಿಂದು 886 ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆ, ಮೂವರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 886 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಅವಧಿಯಲ್ಲಿ 1,999 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,764ರಷ್ಟಾಗಿದೆ....

ವೃದ್ಧರಿಗೆಂದೇ ಇರುವ ಸ್ಟಾರ್ಟಪ್‌ನಲ್ಲಿ ರತನ್‌ ಟಾಟಾ ಹೂಡಿಕೆ

newsics.com ಬೆಂಗಳೂರು: ವೃದ್ಧರಿಗೆ ಜತೆಯಾಗಿದ್ದುಕೊಂಡು ಸೇವೆ ಸಲ್ಲಿಸಲೆಂದು ಆರಂಭವಾಗಿರುವ ಸ್ಟಾರ್ಟಪ್‌ ಕಂಪನಿಯಲ್ಲಿ ಹಿರಿಯ ಉದ್ಯಮಿ ರತನ್ ಟಾಟಾ ಹೂಡಿಕೆ ಮಾಡಲು ಮುಂದಾಗಿದ್ದಾರೆ. ದೇಶಾದ್ಯಂತ ಸುಮಾರು 5 ಕೋಟಿ ವೃದ್ಧರು ಸಂಗಾತಿಗಳಿಲ್ಲದೇ ಒಂಟಿಯಾಗಿದ್ದಾರೆ. ಅವರಿಗೆ ಈ ಕಂಪನಿ...
- Advertisement -
error: Content is protected !!