Wednesday, July 6, 2022

ಜಯಾ ಜೇಟ್ಲಿ ಸೇರಿ ಮೂವರಿಗೆ 4 ವರ್ಷ ಜೈಲು; ದೆಹಲಿ ವಿಶೇಷ ಕೋರ್ಟ್‌ ತೀರ್ಪು

Follow Us

ನವದೆಹಲಿ: ರಕ್ಷಣಾ ಒಪ್ಪಂದದಲ್ಲಿ ನಡೆದಿದ್ದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮತಾ ಪಕ್ಷದ ಮಾಜಿ ಅಧ್ಯಕ್ಷೆ ಜಯಾ ಜೇಟ್ಲಿ ಸೇರಿ ಮೂವರಿಗೆ ದೆಹಲಿಯ ವಿಶೇಷ ಕೋರ್ಟ್‌ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಮೂವರಿಗೂ ತಲಾ ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ಗುರುವಾರ ತೀರ್ಪು ನೀಡಿದೆ.
ಜೇಟ್ಲಿ ಅವರ ಮಾಜಿ ಸಹೋದ್ಯೋಗಿ ಗೋಪಾಲ್ ಪಚೇರ್ವಾಲ್ ಮತ್ತು ನಿವೃತ್ತ ಮೇಜರ್ ಜನರಲ್ ಎಸ್ಪಿ ಮುರ್ಗೈ ಅವರಿಗೂ ಶಿಕ್ಷೆ ವಿಧಿಸಲಾಗಿದ್ದು, ಎಲ್ಲ ಅಪರಾಧಿಗಳೂ ಗುರುವಾರ ಸಂಜೆ 5 ರೊಳಗೆ ಶರಣಾಗುವಂತೆ ಸೂಚಿಸಿದೆ. 2001ರಲ್ಲಿ ವೆಸ್ಟೆಂಡ್ ಇಂಟರ್‌ನ್ಯಾಷನಲ್ ಕಂಪನಿಯ ಪ್ರತಿನಿಧಿಯಾಗಿರುವ ಮ್ಯಾಥ್ಯೂ ಸ್ಯಾಮ್ಯುಯೆಲ್ ಅವರಿಂದ ಆರೋಪಿಗಳು 2006ರಲ್ಲಿ ಅಕ್ರಮ ಹಣ ಸ್ವೀಕರಿಸಿದ್ದಾರೆ. ಸೈನ್ಯದಿಂದ ಥರ್ಮಲ್ ಇಮೇಜರ್‌ಗಳಿಗೆ ಸರಬರಾಜು ಆದೇಶಗಳನ್ನು ಪಡೆಯಲು ಅಕ್ರಮ ಹಣವನ್ನು ಸ್ವೀಕರಿಸಲಾಗಿದೆ ಎಂಬ ಆರೋಪ ಇವರ ಮೇಲಿತ್ತು. ವಿಚಾರಣೆ ನಡೆಸಿದ ದೆಹಲಿಯ ವಿಶೇಷ ಕೋರ್ಟ್‌ ಈ ತೀರ್ಪು ನೀಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ, ...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...
- Advertisement -
error: Content is protected !!