Saturday, April 17, 2021

ಜೆಇಇ, ನೀಟ್ ಪರೀಕ್ಷೆ ಮತ್ತೆ ಮುಂದೂಡಿಕೆ



ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಪರೀಕ್ಷೆಗಳ ಜಂಟಿ ಪ್ರವೇಶ ಪರೀಕ್ಷೆ (JEE) ಮತ್ತು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET)ಗಳನ್ನು ಮತ್ತೆ ಮುಂದೂಡಿ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಶುಕ್ರವಾರ ಸಂಜೆ ತಿಳಿಸಿದೆ.
ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ JEE ಮುಖ್ಯ ಪರೀಕ್ಷೆ ಸೆಪ್ಟೆಂಬರ್ 1ರಿಂದ 6, JEE ಅಡ್ವಾನ್ಸ್ಡ್ ಪರೀಕ್ಷೆ ಸೆಪ್ಟೆಂಬರ್ 27ರಂದು ನಡೆಯಲಿದೆ. ಸೆಪ್ಟೆಂಬರ್ 13ರಂದು NEET ಪರೀಕ್ಷೆ ನಿಗದಿಯಾಗಿದೆ ಎಂದು ಮಾನವ ಸಂಪನ್ಮೂಲ ಇಲಾಖೆ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ.
ವಿಶ್ವವಿದ್ಯಾಲಯ ಅನುದಾನ ಆಯೋಗದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಯುಜಿಸಿ ನೆಟ್), ಕಾಮನ್ ಮ್ಯಾನೇಜ್‌ಮೆಂಟ್ ಅಡ್ಮಿಷನ್ ಟೆಸ್ಟ್ (ಸಿಎಂಎಟಿ) ಪರೀಕ್ಷೆಗಳ ಜತೆಗೆ ಈ ಪರೀಕ್ಷೆಗಳನ್ನು ಕೂಡ ನಡೆಸುವ ಹೊಣೆಗಾರಿಕೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (ಎನ್‌ಟಿಎ) ವಹಿಸಿಕೊಂಡಿದೆ. ಇದಕ್ಕೂ ಮುನ್ನ JEE ಮತ್ತು NEETನಿರ್ವಹಣೆಯನ್ನು ಸಿಬಿಎಸ್‌ಇ ನಡೆಸುತ್ತಿತ್ತು.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!