ಗಾಜಿಯಾಬಾದ್: ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಪತ್ರಕರ್ತ ವಿಕ್ರಂ ಜೋಷಿ ನಿಧನ ಹೊಂದಿದ್ದಾರೆ. ಜುಲೈ 20ರಂದು ಅವರ ಮೇಲೆ ಕೆಲವು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಗಾಜಿಯಾಬಾದ್ ನ ವಿಜಯನಗರ ದಲ್ಲಿರುವ ಮನೆಯ ಸಮೀಪ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು.
ವಿಕ್ರಂ ಜೋಷಿ ಅವರ ಸೊಸೆಗೆ ಕೆಲವು ದುರುಳರು ಚುಡಾಯಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿಯನ್ನು ಬಂಧಿಸಲಾಗಿದೆ. ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.
ಈ ಕೃತ್ಯದಲ್ಲಿ ಇನ್ನೂ ಕೆಲವರು ಭಾಗಿಯಾಗಿದ್ದು, ಅವರ ಬಂಧನಕ್ಕೆ ಶೋಧ ಕಾರ್ಯಮುಂದುವರಿದಿದೆ