Newsics.com
ಮುಂಬೈ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಬಂಧಿಸಿರುವ ರಿಪಬ್ಲಿಕ್ ಸುದ್ದಿ ವಾಹಿನಿಯ ಮುಖ್ಯ ಸಂಪಾದಕ ಅರ್ನಾಬ್ ಗೋ ಸ್ವಾಮಿ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಆಲಿಭಾಗ್ ಜಿಲ್ಲಾ ನ್ಯಾಯಾಲಯ ಈ ಆದೇಶ ನೀಡಿದೆ. ಆರೋಪಿಯನ್ನು ತಮ್ಮ ವಶಕ್ಕೆ ನೀಡಬೇಕು ಎಂದು ಪೊಲೀಸರು ಮಾಡಿದ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಲಿಲ್ಲ.
ಬುಧವಾರ ಬೆಳಿಗ್ಗೆ ಮುಂಬೈನಲ್ಲಿರುವ ಅರ್ನಾಬ್ ಗೋ ಸ್ವಾಮಿ ನಿವಾಸದ ಮೇಲೆ ದಾಳಿ ನಡೆಸಿದ್ದ ಪೊಲೀಸರು ಅವರನ್ನು ಬಂಧಿಸಿದ್ದರು. ಬಳಿಕ ಆಲಿ ಭಾಗ್ ಗೆ ಕರೆದೊಯ್ಯಲಾಗಿತ್ತು.
ಇಂಟೇರಿಯರ್ ಡಿಸೈನರ್ ಆಗಿದ್ದ ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅರ್ನಾಬ್ ಗೋ ಸ್ವಾಮಿಯನ್ನು ಬಂಧಿಸಲಾಗಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹೊರಿಸಲಾಗಿದೆ.