newsics.com
ಲಕ್ನೋ: ಹಿರಿಯ ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ಅಸ್ವಸ್ಥರಾಗಿದ್ದಾರೆ. ಅವರನ್ನು ಲಕ್ನೋದಲ್ಲಿರುವ ಆಸ್ಪತ್ರೆಗೆ ಸೇರಿಸಲಾಗಿದೆ. 88 ವರ್ಷ ಪ್ರಾಯದ ಕಲ್ಯಾಣ್ ಸಿಂಗ್ ವಯೋ ಸಹಜ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ.
ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ತಳಮಟ್ಟದಲ್ಲಿ ಕಟ್ಟಿ ಬೆಳೆಸಿದ ಅಗ್ರ ನಾಯಕರಲ್ಲಿ ಕಲ್ಯಾಣ್ ಸಿಂಗ್ ಕೂಡ ಒಬ್ಬರಾಗಿದ್ದಾರೆ. ರಾಜಸ್ತಾನ ರಾಜ್ಯಪಾಲರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.
ಇಂದು ಮಧ್ಯಾಹ್ನ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಪರಿಸ್ಥಿತಿ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆಯಾಗುವ ಸಾಧ್ಯತೆಯಿದೆ.