Saturday, December 10, 2022

ಕಾಂತಾರ ವರಾಹರೂಪಂ ಹಾಡು ಬಳಕೆಗೆ ಅನುಮತಿ

Follow Us

newsics.com

ಕೇರಳ: ಕಾಂತಾರ ಸಿನಿಮಾದ ವರಾಹ ರೂಪಂ ಹಾಡಿಗೆ ನೀಡಿದ್ದ ತಡೆಯಾಜ್ಞೆಯನ್ನು ಕೇರಳ ಸ್ಥಳೀಯ ಕೋರ್ಟ್ ತೆರುವು ಮಾಡಿದ್ದು ಹಾಡು ಬಳಕೆಗೆ ಅನುಮತಿ ನೀಡಿದೆ.

ವರಾಹ ರೂಪಂ ಹಾಡನ್ನು ಬಳಸದಂತೆ ತಾತ್ಕಾಲಿಕ  ತಡೆಯಾಜ್ಞೆ ನೀಡಿದ್ದ ಕೋಯಿಕ್ಕೋಡ್ ನ್ಯಾಯಾಲಯ ವಿವಾದದ ಬಗ್ಗೆ ಅಂತಿಮ ಆದೇಶ ಹೊರಡಿಸಿದ್ದು ತೈಕ್ಕುಡಂ ಬ್ರಿಡ್ಜ್ ಅರ್ಜಿಯನ್ನೇ ವಜಾ ಮಾಡಿದೆ.

ವಿವಾದದಲ್ಲಿ ಹೊಂಬಾಳೆ ಫಿಲ್ಮ್ಸ್‌ಗೆ ಮೊದಲ ಯಶಸ್ಸು ಸಿಕ್ಕಿದ್ದು, ಈ ಹಿಂದಿನಂತೆಯೇ ವರಾಹರೂಪಂ ಹಾಡು ಬಳಕೆಗೆ ಅನುಮತಿ ಸಿಕ್ಕಿದೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಪ್ರಕಟಿಸಿದ ವರಾಹರೂಪಂ ಹಾಡಿನ ಬರಹಗಾರ ಶಶಿಧರ್‌ ಕಾವೂರು, ಇಂದು ಕೆಳ ನ್ಯಾಯಾಲಯವು ಎರಡೂ ಕಡೆಯವರ ವಾದ ಆಲಿಸಿದ ಬಳಿಕ ಥೈಕ್ಕುಡಂ ಬ್ರಿಡ್ಜ್ ಅರ್ಜಿಯನ್ನು ವಜಾಗೊಳಿಸಿದೆ ಮತ್ತು ವರಾಹರೂಪಂ ಹಾಡಿಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ತೆರವು ಮಾಡಿದೆ. ನ್ಯಾಯ ಗೆದ್ದಿತು. ಜೈ ತುಳುನಾಡು ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಮನೆಗೆ ನುಗ್ಗಿ ಯುವತಿಯ ಅಪಹರಣ, ದಾಂಧಲೆ: 100 ಯುವಕರ ಕೃತ್ಯ

newsics.com ಹೈದರಾಬಾದ್: ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರನ್ನು ಮನೆಗೆ ನುಗ್ಗಿ ಅಪಹರಿಸಲಾಲಿಗೆದ.  ನೂರು ಮಂದಿ ಯುವಕರ ತಂಡ ಮನೆಗೆ ನುಗ್ಗಿ ಮಗಳನ್ನು ಅಪಹರಿಸಿದ್ದಾರೆ ಎಂದು ಪೋಷಕರು...

2023ರ ‘ಬಾಬಾ ವಂಗಾ’ ಭವಿಷ್ಯ – ಲ್ಯಾಬ್​ನಲ್ಲಿ ಮಕ್ಕಳ ಜನನ, ಲಕ್ಷಾಂತರ ಮಂದಿ ಸಾವು

newsics.com ನವದೆಹಲಿ: ವಿಶ್ವ ಪ್ರಸಿದ್ಧ ಬಾಬಾ ವಂಗಾ ಅನೇಕ ಭವಿಷ್ಯವಾಣಿಗಳು ನಿಜವೆಂದು ಸಾಬೀತಾಗಿದೆ. ಇದೀಗ 2023ರ ಕುರಿತು ಭಯಾನಕ ಭವಿಷ್ಯ ನುಡಿದಿದ್ದಾರೆ. 2023 ರ ಬಗ್ಗೆ ಬಾಬಾ ವಂಗಾ ನುಡಿದ ಅತ್ಯಂತ ಆತಂಕಕಾರಿ ಭವಿಷ್ಯವಾಣಿಯೆಂದರೆ, ಸೂರ್ಯನಿಂದ...

ಕೆಎಂಎಫ್ ಸಿಹಿ ತಿನಿಸು, ತುಪ್ಪದ ದರ ಏರಿಕೆ

newsics.com ಬೆಂಗಳೂರು: ಹಾಲಿನಿಂದ ತಯಾರಾಗುವ ಎಲ್ಲ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.  ಇದೀಗ ಕೆಎಂಎಫ್ ಸಿಹಿ ತಿನಿಸು ಹಾಗೂ ತುಪ್ಪದ ದರ ಏರಿಕೆ. ಕೆಎಂಎಫ್  ಪ್ರತಿ ಉತ್ಪನ್ನದ ಮೇಲೆ ಶೇ. 5 ರಿಂದ ರಿಂದ ಶೇ....
- Advertisement -
error: Content is protected !!