ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿ ಮತ್ತು ಸವಾಲುಗಳ ಕುರಿತಂತೆ ಇಂದು ಉನ್ನತ ಮಟ್ಟದ ಮಾತುಕತೆ ನಡೆಯಿತು. ಭೂ ಸೇನಾ ಮುಖ್ಯಸ್ಥ ಎಂ ಎಂ ನರ್ವಾಣೆ ಮತ್ತು ಉತ್ತರ ವಲಯ ಸೇನಾ ಮುಖ್ಯಸ್ಛ ಲೆಫ್ಟಿನೆಂಟ್ ಜನರಲ್ ರಣಬೀರ್ ಸಿಂಗ್, ಆಡಳಿತ ಮುಖ್ಯಸ್ಛ ಹಾಗೂ ಲೆಫ್ಟಿನೆಂಟ್ ಗವರ್ನರ್ ಆಗಿರುವ ಗಿರೀಶ್ ಚಂದ್ರ ಮರ್ಮು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಜಮ್ಮು ಕಾಶ್ಮೀರದಲ್ಲಿ ಕಾನೂನು ಮತ್ತು ಶಿಸ್ತು ಪರಿಸ್ಥಿತಿ ಸುಧಾರಿಸುತ್ತಿದ್ದರೂ ಕೆಲವು ಭಯೋತ್ಪಾದಕ ಸಂಘಟನೆಗಳು ಹತಾಶೆಯಿಂದ ದಾಳಿ ಮಾಡುವ ಪ್ರವೃತ್ತಿ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಎಳ್ಳಷ್ಟು ರಾಜೀ ಮಾಡಿಕೊಳ್ಳುವುದಿಲ್ಲ ಎಂದು ಸೇನೆ ಈಗಾಗಲೇ ಸ್ಪಷ್ಟಪಡಿಸಿದೆ.