ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನ್ನು ಪ್ರಶ್ನಿಸಿ ಕೇರಳ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಸಿಎಎ ಅನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ ಮೊದಲ ರಾಜ್ಯ ಇದಾಗಿದೆ.
ಕೇಂದ್ರ ಸರ್ಕಾರ ಮತ್ತು ಇತರ ರಾಜ್ಯಗಳ ನಡುವಿನ ವ್ಯಾಜ್ಯಗಳ ವಿಚಾರಣೆಗೆ ಅವಕಾಶ ಕಲ್ಪಿಸಿದ ಸಂವಿಧಾನದ 131ನೇ ಪರಿಚ್ಚೇದ ಅಡಿಯಲ್ಲಿ ಈ ಅರ್ಜಿಯನ್ನು ಸಲ್ಲಿಸಲಾಗಿದೆ.
ಸಿಎಎ ಸಂವಿಧಾನದ 14,21 ಮತ್ತು 25ರ ಉಲ್ಲಂಘನೆ ಮತ್ತು ದೇಶದ ಮೂಲ ಜಾತ್ಯತೀತತೆಯ ರಚನೆಗೆ ವಿರುದ್ಧವಾಗಿದೆ ಎಂದು ಘೋಷಿಸಿದೆ ಎಂದು ಸರ್ಕಾರ ಅರ್ಜಿಯಲ್ಲಿ ಕೋರಿದೆ.
ಸಿಎಎ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಕೇರಳ ಸರ್ಕಾರ
Follow Us