newsics.com
ಕೇರಳ : ಸಂವಿಧಾನದ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕೆ ವಿಪಕ್ಷಗಳಿಂದ ಭಾರೀ ಟೀಕೆಯನ್ನು ಕೇಳಿದ್ದ ಕೇರಳ ಸಚಿವ ಸಾಜಿ ಚೆರಿಯಾನ್ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ಘೋಷಿಸಿದ್ದಾರೆ.
ಸಚಿವ ಸಂಪುಟದಲ್ಲಿ ಸಾಂಸ್ಕೃತಿಕ ಮತ್ತು ಮೀನುಗಾರಿಕೆ ಖಾತೆಗಳನ್ನು ಹೊಂದಿರುವ ಹಿರಿಯ ಸಿಪಿಐ(ಎಂ) ನಾಯಕ ಚೆರಿಯನ್ ಮುಖ್ಯಮಂತ್ರಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಭೇಟಿ ಮಾಡಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದರು.