Tuesday, April 13, 2021

ನಾಳೆ ಕೇರಳ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ

ತಿರುವನಂತಪುರಂ: ಮಾರಕ ಕೊರೋನಾ ಸವಾಲುಗಳ ಮಧ್ಯೆ ನಡೆದ ಕೇರಳದ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ.  ಮಂಗಳವಾರ ಮಧ್ಯಾಹ್ನ ಎರಡು ಗಂಟೆಗೆ ಆನ್ ಲೈನ್ ಮೂಲಕ ಫಲಿತಾಂಶ ಪ್ರಕಟಗೊಳ್ಳಲಿದೆ. ನಾಲ್ಕು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ  ಬರೆದಿದ್ದರು. ಸಾಮಾನ್ಯವಾಗಿ ಕರ್ನಾಟಕದ ಎಸ್ ಎಸ್ ಎಲ್ ಸಿ ಫಲಿತಾಂಶ ಕೇರಳಕ್ಕಿಂತ ಮೊದಲು ಪ್ರಕಟವಾಗುತ್ತಿತ್ತು. ಈ ಬಾರಿ ಮಾತ್ರ ಕೇರಳದಲ್ಲಿ ಮೊದಲು ಫಲಿತಾಂಶ  ಪ್ರಕಟಗೊಳ್ಳುತ್ತಿದೆ. ರಾಜ್ಯದ ಕೊಡಗಿನ ಗಡಿಭಾಗದ  ಕೆಲವು ವಿದ್ಯಾರ್ಥಿಗಳು ಕೇರಳದ ವಯನಾಡಿನಲ್ಲಿ ಪರೀಕ್ಷೆ ಬರೆದಿದ್ದರು.  ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಲವು ಬಾರಿ ಕೇರಳದ ಹೆಸರು ಪ್ರಸ್ತಾಪಿಸಿದ್ದರು. ಪ್ರತಿವರ್ಷ ಕಾಸರಗೋಡಿನ ಸಾವಿರಾರು ಮಂದಿ ವಿದ್ಯಾರ್ಥಿಗಳು ಕರ್ನಾಟಕದ ವಿವಿಧ ಕಾಲೇಜುಗಳಲ್ಲಿ ಪ್ರವೇಶ ಪಡೆಯುತ್ತಿದ್ದರು.  ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ಪ್ರವೇಶ ಪ್ರಕ್ರಿಯೆ ವಿಳಂಬವಾಗಲಿದೆ

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!