ಕೊಚ್ಚಿ: ಕೇರಳದ ಕೊಚ್ಚಿಯಲ್ಲಿ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಿದ ಕಾರ್ಯಾಚರಣೆ ಕುರಿತಂತೆ ಕೇರಳ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಲಿದೆ. ಸುಪ್ರೀಂ ಕೋರ್ಟ್ ನಿಗದಿ ಪಡಿಸಿದ್ದ ಮಾರ್ಗ ಸೂಚಿಗಳ ಅಡಿಯಲ್ಲಿ ಹೇಗೆ ಕಾರ್ಯಾಚರಣೆ ನಡೆಸಲಾಯಿತು, ಸುರಕ್ಷಿತ ಕ್ರಮಗಳ ಮಾಹಿತಿ ಮತ್ತು ಮುಂದಿನ ದಿನಗಳಲ್ಲಿ ಅಕ್ರಮ ಕಟ್ಟಡಗಳ ಕುರಿತಂತೆ ಹೊಂದಿರುವ ನಿಲುವಿನ ಬಗ್ಗೆ ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಲಿದೆ.