newsics.com
ಶಾರ್ಜಾ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಬುಧವಾರ ಶಾರ್ಜಾದಲ್ಲಿ ನಡೆದ ಎರಡನೇ ಕ್ವಾಲಿಫೈಯರ್ ಹಣಾಹಣಿಯಲ್ಲಿ ಮೂರು ವಿಕೆಟ್ ಅಂತರದ ಗೆಲುವು ದಾಖಲಿಸಿರುವ ಕೋಲ್ಕತ್ತ ನೈಟ್ ರೈಡರ್ಸ್ ಫೈನಲ್ ಪ್ರವೇಶಿಸಿದೆ.
ಇನ್ನೂ ಒಂದು ಎಸೆತ ಬಾಕಿ ಉಳಿದಿರುವಂತೆಯೇ ಗೆಲುವು ದಾಖಲಿಸಿರುವ ಕೋಲ್ಕತ್ತ, ರೋಚಕ ಗೆಲುವು ದಾಖಲಿಸಿದೆ. ಅಕ್ಟೋಬರ್ 15ರ ಶುಕ್ರವಾರ ನಡೆಯಲಿರುವ ಫೈನಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸವಾಲನ್ನು ಎದುರಿಸಲಿದೆ.
ಭಾನುವಾರ ನಡೆದ ಮೊದಲ ಕ್ವಾಲಿಫೈಯರ್ನಲ್ಲಿ ಡೆಲ್ಲಿ ತಂಡವನ್ನು ಮಣಿಸಿದ್ದ ಸಿಎಸ್ಕೆ ಫೈನಲ್ಗೆ ಪ್ರವೇಶಿಸಿತ್ತು. ವರುಣ್ ಚಕ್ರವರ್ತಿ (26ಕ್ಕೆ 2 ವಿಕೆಟ್) ಸೇರಿದಂತೆ ಕೆಕೆಆರ್ ಬೌಲರ್ಗಳ ಪ್ರಭಾವಿ ದಾಳಿಗೆ ಸಿಲುಕಿದ ಡೆಲ್ಲಿ ತಂಡವು ಐದು ವಿಕೆಟ್ ನಷ್ಟಕ್ಕೆ 135 ರನ್ ಗಳಿಸಿತು.
ಕೋಲ್ಕತ್ತ ತಂಡಕ್ಕೆ ವೆಂಕಟೇಶ್ ಅಯ್ಯರ್ ಹಾಗೂ ಶುಭಮನ್ ಗಿಲ್ ಮೊದಲ ವಿಕೆಟ್ಗೆ 96 ರನ್ಗಳ ಜೊತೆಯಾಟ ತಂಡವನ್ನು ಗೆಲುವಿನತ್ತ ಮುನ್ನಡೆಸಿತು. ಅಂತಿಮ ಓವರ್ನಲ್ಲಿ ಸಿಕ್ಸರ್ ಬಾರಿಸುವ ಮೂಲಕ ರಾಹುಲ್ ತ್ರಿಪಾಠಿ ರೋಚಕ ಗೆಲುವು ತಂದುಕೊಟ್ಟರು.