ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆ ನೌಕರರಿಗೆ ಪೂರ್ಣ ಪ್ರಮಾಣದ ಸರ್ಕಾರಿ ನೌಕರರ ಸೌಲಭ್ಯ ದೊರೆಯಬೇಕು. ಈ ಸಂಬಂಧ ರಾಜ್ಯ ಸರ್ಕಾರ ಮುಂದಿನ ಮುಂಗಡ ಪತ್ರದಲ್ಲಿ ಆರ್ಥಿಕ ಯೋಜನೆಗಳನ್ನು ಪ್ರಕಟಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಈ ಸಂಬಂಧ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಆಂಧ್ರಪ್ರದೇಶದಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಇತ್ತೀಚೆಗೆ ಸಾರಿಗೆ ಸಂಸ್ಥೆ ನೌಕರರನ್ನು ಪೂರ್ಣ ಪ್ರಮಾಣದ ಸರ್ಕಾರಿ ನೌಕರರೆಂದು ಘೋಷಿಸಿದ್ದರು. ಬಳಿಕ ತೆಲಂಗಾಣದಲ್ಲಿ ಕೂಡ ಇದೇ ಬೇಡಿಕೆ ಮುಂದಿಟ್ಟು 55 ದಿನಗಳ ಕಾಲ ಸಾರಿಗೆ ಸಂಸ್ಥೆ ನೌಕರರು ಮುಷ್ಕರ ನಡೆಸಿದ್ದರು. ಆದರೆ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಈ ಬೇಡಿಕೆ ತಳ್ಳಿಹಾಕಿದ್ದರು