Monday, May 17, 2021

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com
ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ ಆಗಮಿಸಿದ್ದ ಮಹಾ ನಿರ್ವಾಣಿ ಅಖಾಡದ ಮುಖ್ಯಸ್ಥ ಕಪಿಲ್ ದೇವ್ ಶುಕ್ರವಾರ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕಳೆದ ಐದು ದಿನಗಳಿಂದ ಹರಿದ್ವಾರದಲ್ಲಿ 2167 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ ಎಂದು ಉತ್ತರಾಖಂಡ ಸರ್ಕಾರ ತಿಳಿಸಿದೆ.
ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಿದ್ದ 30 ಸಾಧುಗಳಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದಾಗಿ ನಗರದ ಮುಖ್ಯ ವೈದ್ಯಾಧಿಕಾರಿ ಶುಕ್ರವಾರ ಮಾಹಿತಿ ನೀಡಿದ್ದಾರೆ.
ಅಖಾಡಗಳಿಗೆ ವೈದ್ಯಕೀಯ ತಂಡಗಳನ್ನು ಕಳುಹಿಸಲಾಗಿದ್ದು, ನಿರಂತರವಾಗಿ ಸಾಧುಗಳಿಗೆ ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಲಾಗುತ್ತಿದೆ. ಏಪ್ರಿಲ್ 17ರಿಂದ ಈ ಪರೀಕ್ಷಾ ಪ್ರಕ್ರಿಯೆಯನ್ನು ಇನ್ನಷ್ಟು ಚುರುಕುಗೊಳಿಸಲಾಗುತ್ತದೆ ಎಂದು ವೈದ್ಯಾಧಿಕಾರಿ ಡಾ. ಎಸ್‌.ಕೆ. ಝಾ ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,17,000 ಪ್ರಕರಣಗಳು ಪತ್ತೆಯಾಗಿವೆ, ಕುಂಭ ಮೇಳ ಈಗ ಕೊರೋನಾ ಹಾಟ್ ಸ್ಪಾಟ್ ಆಗಿದೆ.

ಮತ್ತಷ್ಟು ಸುದ್ದಿಗಳು

Latest News

ಮರದ ಮೇಲೆಯೇ 11 ದಿನ‌ ಐಸೋಲೇಟ್ ಆದ ಕೊರೋನಾ ಸೋಂಕಿತ ವಿದ್ಯಾರ್ಥಿ!

newsics.com ಹೈದರಾಬಾದ್: ಕೊರೋನಾ ಸೋಂಕಿತರು ಹೋಂ‌ ಐಸೋಲೇಷನ್ ಗೆ ಒಳಗಾಗಲು ಹಲವು‌ ಕುಟುಂಬಗಳು ಮನೆಯಲ್ಲಿ ಜಾಗದ ಅಭಾವವನ್ನೂ ಎದುರಿಸುತ್ತಿವೆ. ತೆಲಂಗಾಣದ ನಲಗೊಂಡ ಜಿಲ್ಲೆಯ ಹಲವು ಕುಟುಂಬಗಳು ಅಡುಗೆ ಕೋಣೆ...

ಏನಿದು ಲಸಿಕೆ ಪಾಸ್‌ಪೋರ್ಟ್‌?

newsics.com ನವದೆಹಲಿ: ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ವಿರುದ್ಧದ ಲಸಿಕೆ ಅಭಿಯಾನ ನಡೆಯುತ್ತಿರುವ ವೇಳೆಯಲ್ಲೇ 'ಲಸಿಕೆ ಪಾಸ್‌ಪೋರ್ಟ್‌' ಸದ್ದು ಮಾಡುತ್ತಿದೆ. ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಪದ. ಹೆಚ್ಚು ಜನರು ಲಸಿಕೆ...

ಫೇಸ್’ಬುಕ್’ನಲ್ಲಿ ಉಗ್ರ ಸಿದ್ಧಾಂತದ ಫೋಸ್ಟ್: ತಮಿಳುನಾಡಿನ 4 ಕಡೆ ಎನ್ಐಎ ಶೋಧ

newsics.com ಚೆನ್ನೈ: ಉಗ್ರ ಸಂಘಟನೆಗಳ ಸಿದ್ಧಾಂತ ಪ್ರತಪಾದಿಸುವ ಪೋಸ್ಟ್'ಗಳನ್ನು ಫೇಸ್'ಬುಕ್'ನಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಭಾನುವಾರ ತಮಿಳುನಾಡಿನ ಮಧುರೈ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಿದೆ. ಮಧುರೈ ಜಿಲ್ಲೆಯ ಕಾಜಿಮಾರ್...
- Advertisement -
error: Content is protected !!