Saturday, April 17, 2021

ವಿಮಾನ ನಿಲ್ದಾಣದಲ್ಲಿ ವಿಮಾನಕ್ಕೆ ಬಡಿದ ಲ್ಯಾಡರ್

ಮುಂಬೈ:  ಇಲ್ಲಿನ ವಿಮಾನ ನಿಲ್ದಾಣದಲ್ಲಿ ಭಾರೀ ಅಪಘಾತವೊಂದು ಸ್ವಲ್ಪದರಲ್ಲಿಯೇ ತಪ್ಪಿದೆ.  ಬಲವಾದ ಗಾಳಿಯಿಂದಾಗಿ ನಿಂತಿದ್ದ ವಿಮಾನಕ್ಕೆ ಇನ್ನೊಂದು ವಿಮಾನದ  ಲ್ಯಾಡರ್ ಅಪ್ಪಳಿಸಿದೆ. ಇಂಡಿಗೋ ವಿಮಾನಕ್ಕೆ ಪಕ್ಕದಲ್ಲಿದ್ದ ಸ್ಪೈಸ್ ಜೆಟ್ ಸಂಸ್ಥೆಗೆ ಸೇರಿದ ಲ್ಯಾಡರ್ ಅಪ್ಪಳಿಸಿದೆ. ಬಲವಾದ ಗಾಳಿಗೆ ಲ್ಯಾಡರ್  ನಿಂತಿದ್ದ ವಿಮಾನಕ್ಕೆ ಬಡಿದಿದೆ ಎಂದು ಮೂಲಗಳು ಹೇಳಿವೆ. ಘಟನೆಯಲ್ಲಿ ಯಾರಿಗೂ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಆದರೆ ಇಂಡಿಗೋ ವಿಮಾನದ ರೆಕ್ಕೆ ಮತ್ತು ಎಂಜಿನ್ ಗೆ ಹಾನಿಯಾಗಿದೆ. ಘಟನೆ ಕುರಿತು ತನಿಖೆಗೆ ಆದೇಶ ನೀಡಲಾಗಿದೆ

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!