Saturday, June 10, 2023

ಸೇನೆಯಲ್ಲಿ ಮಹಿಳಾ ಅಧಿಕಾರಿಗಳಿಗೆ ಕಮಾಂಡರ್ ಹುದ್ದೆ : ಸುಪ್ರೀಂಕೋರ್ಟ್

Follow Us

ನವದೆಹಲಿ,: ಭಾರತೀಯ ಸೇನೆಯಲ್ಲಿ ಮಹಿಳಾ ಅಧಿಕಾರಿಗಳಿಗೆ ಕಮಾಂಡರ್ ಹುದ್ದೆ ನೀಡಬೇಕೆಂದು ದೆಹಲಿ ಹೈಕೋರ್ಟ್ ನೀಡಿದ್ದ  ಆದೇಶವನ್ನು ಸುಪ್ರೀಂಕೋರ್ಟ್ ಸೋಮವಾರ ಎತ್ತಿಹಿಡಿದಿದೆ.

ಮಹಿಳಾ ಅಧಿಕಾರಿಗಳನ್ನು ಕಮಾಂಡರ್ ಹುದ್ದೆಗೆ ನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ನೀಡಿರುವ ತೀರ್ಪನ್ನು ಜಾರಿಗೊಳಿಸದ ಕೇಂದ್ರದ ಕ್ರಮದ ಬಗ್ಗೆ ನ್ಯಾಯಾಲಯ ಅಸಮಾಧಾನ ಹೊರಹಾಕಿದೆ. ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಕಮೀಷನ್ ಹುದ್ದೆ ಹುದ್ದೆ ನೀಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ತನ್ನ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳಬೇಕು. ಮಹಿಳಾ ಅಧಿಕಾರಿಗಳನ್ನು ನೇಮಕಾತಿ ಮಾಡಿಕೊಳ್ಳುವ ಸಂದರ್ಭದಲ್ಲಿಯೇ ಪುರುಷರ ನೇಮಕಾತಿಯ ನೀತಿ, ನಿಬಂಧನೆಗಳ ಪ್ರಕಾರವೇ ಮಾಡಬೇಕು ಎಂದೂ ಸ್ಪಷ್ಟಪಡಿಸಿದೆ.

ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಮಹಿಳಾ ಅಧಿಕಾರಿಗಳಿಗೆ ಪರ್ಮನೆಂಟ್ ಕಮಿಷನ್ ಅನ್ವಯವಾಗಲಿದೆ ಎಂದೂ ಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ. ಸೇನೆಯಲ್ಲಿ ಮಹಿಳೆಯರಿಗೆ ಕಮಾಂಡರ್ ಹುದ್ದೆ ನೀಡಬೇಕೆಂದು  ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ...

ಗ್ಯಾರಂಟಿ ಜಾರಿ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್

newsics.com ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಜಾರಿಗೊಳಿಸಿದ ಬೆನ್ನಲ್ಲೇ ಮದ್ಯದ ಬೆಲೆಯನ್ನು ದುಪ್ಪಟ್ಟು ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಕರೆಂಟ್ ಬಿಲ್ ದರ ಏರಿಕೆ ಬಳಿಕ...

ಚಂಡಮಾರುತ: ಕರ್ನಾಟಕ ಸೇರಿ 3 ರಾಜ್ಯಗಳಿಗೆ ಅಲರ್ಟ್

Newsics.com ನವದೆಹಲಿ: ಅರಬ್ಬೀ ಸಮುದ್ರದ ಕರಾವಳಿ ಭಾಗದಲ್ಲಿ ಭಾರೀ ಆತಂಕ ಮೂಡಿಸಿರುವ ಬಿಪರ್ಜೋಯ್ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದ್ದು ಉತ್ತರ ಈಶಾನ್ಯದೆಡೆಗೆ ಚಲಿಸಲಿದೆ...
- Advertisement -
error: Content is protected !!