newsics.com
ಲಕ್ನೋ: ಲಖೀಂಪುರದಲ್ಲಿ ನಡೆದ ಹಿಂಸಾಚಾರ ಪ್ರಕರಣದ ಆರೋಪಿ ಹಾಗೂ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ ಮಿಶ್ರಾ ಅವರ ಪುತ್ರ ಅಶೀಷ್ ಮಿಶ್ರಾ ವಿಚಾರಣೆಗೆ ಹಾಜರಾಗಿದ್ದಾನೆ.
ಲಖೀಂಪುರದ ಪೊಲೀಸ್ ಠಾಣೆಗೆ ಹಾಜರಾಗಿದ್ದು, ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಲಖೀಂಪುರ ಹಿಂಸಾಚಾರ ಕುರಿತ ತನಿಖೆಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಕೇಂದ್ರ ಸಚಿವರ ಪುತ್ರ ವಿಚಾರಣೆಗೆ ಹಾಜರಾಗಿದ್ದಾನೆ.
ಲಖೀಂಪುರದಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ 9 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದಕ್ಕೆ ಕೇಂದ್ರ ಸಚಿವರ ಪುತ್ರನೇ ಕಾರಣ ಎಂದು ಪ್ರತಿಪಕ್ಷಗಳು ಆರೋಪಿಸಿವೆ