newsics.com
ಶ್ರೀನಗರ: ಭಯೋತ್ಪಾದನೆ ವಿರುದ್ದದ ಹೋರಾಟದಲ್ಲಿ ಭದ್ರತಾಪಡೆಗಳು ಭಾರೀ ಮೇಲುಗೈ ಸಾಧಿಸಿವೆ. ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲದ ಲಷ್ಕರ್ ಸಂಘಟನೆಗೆ ಸೇರಿದ ಭಯೋತ್ಪಾದಕನನ್ನು ಹೊಡೆದುರುಳಿಸುವಲ್ಲಿ ಭದ್ರತಾಪಡೆ ಯಶಸ್ವಿಯಾಗಿದೆ.
ಹತನಾದ ಭಯೋತ್ಪಾದಕನನ್ನು ಉಸ್ಮಾನ್ ಎಂದು ಗುರುತಿಸಲಾಗಿದೆ. ಕಳೆದ ಆರು ತಿಂಗಳಿನಿಂದ ಭಯೋತ್ಪಾದಕ ಉಸ್ಮಾನ್ ಜಮ್ಮು ಕಾಶ್ಮೀರದಲ್ಲಿ ಭೀತಿಯ ವಾತಾವರಣ ಸೃಷ್ಟಿಸುತ್ತಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ತಿಳಿಸಿದ್ದಾರೆ.
ಎ ಕೆ 47 ರೈಫಲ್ಸ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.