newsics.com
ನವದೆಹಲಿ: ಅಸ್ವಸ್ಥರಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಇಂದು ಸಿಂಗಾಪುರಕ್ಕೆ ತೆರಳಿದ್ದಾರೆ. ಕಿಡ್ನಿ ವೈಫಲ್ಯದಿಂದ ಕೂಡ ಲಾಲು ಪ್ರಸಾದ್ ಯಾದವ್ ಬಳಲುತ್ತಿದ್ದಾರೆ. ಲಾಲು ಪುತ್ರಿ ರೋಹಿಣಿ ಆಚಾರ್ಯ ತಂದೆಗೆ ಕಿಡ್ನಿ ನೀಡಲು ಮುಂದೆ ಬಂದಿದ್ದಾರೆ.
ಶಸ್ತ್ರ ಚಿಕಿತ್ಸೆ ಸಿಂಗಾಪುರದಲ್ಲಿ ನಡೆಯಲಿದೆ. ಲಾಲು ಜತೆ ಅವರ ಕಿರಿಯ ಪುತ್ರ ತೇಜಸ್ವಿ ಯಾದವ್ ಮತ್ತು ಇತರ ಸಂಬಂಧಿಕರು ಕೂಡ ಸಿಂಗಾಪುರಕ್ಕೆ ತೆರಳಿದ್ದಾರೆ.
ಮೇವು ಹಗರಣದಲ್ಲಿ ಅಪರಾಧಿಯಾಗಿರುವ ಲಾಲು ಪ್ರಸಾದ್ ಯಾದವ್ ಇದೀಗ ಜಾಮೀನು ಪಡೆದು ಹೊರಬಂದಿದ್ದಾರೆ