Tuesday, April 13, 2021

ಬರಾಕ್ ಕಣಿವೆಯಲ್ಲಿ ಭೂಕುಸಿತ; 20 ಮಂದಿ ಸಮಾಧಿ

ಗುವಾಹಟಿ: ದಕ್ಷಿಣ ಅಸ್ಸಾಂನ ಬರಾಕ್​ ಕಣಿವೆಯಲ್ಲಿ ನಿರಂತರ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಮಹಿಳೆಯರು, ಮಕ್ಕಳು ಸೇರಿ 20ಕ್ಕೂ ಹೆಚ್ಚು ಜನ ಭೂಸಮಾಧಿಯಾಗಿದ್ದಾರೆ. 15 ಮಂದಿಗೆ ಗಂಭೀರ ಗಾಯಗಳಾಗಿವೆ.
ಕರೀಂಗಂಜ್​ ಜಿಲ್ಲೆಯ ಕಾಳಿಗಂಜ್​ನಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಐವರು ಸೇರಿ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ.
ಚಾಚಾರ್​ ಜಿಲ್ಲೆಯ ಕೋಲಾಪುರದಲ್ಲಿ ಮನೆಯ ಮೇಲೆ ಗುಡ್ಡ ಕುಸಿದು 3 ಮಹಿಳೆಯರು ಮೃತಪಟ್ಟಿದ್ದಾರೆ. ಹೈಲಾಕಂಡಿ ಜಿಲ್ಲೆಯ ಭಟಾಟ್​ಬಜಾರ್​ ಗ್ರಾಮದಲ್ಲಿ 3 ಮಹಿಳೆಯರು ಸೇರಿ 7 ಮಂದಿ ಸಮಾಧಿಯಾಗಿದ್ದಾರೆ. ಫುಲೆಟ್ರಾಲ್​ ಚಾಚಾರ್​ ಪ್ರದೇಶದಲ್ಲೂ ಭೂಕುಸಿತ ಉಂಟಾಗಿದ್ದು, ಅಧಿಕಾರಿಗಳು ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!