Tuesday, April 13, 2021

ನಿಸರ್ಗ ಚಂಡಮಾರುತದ ಮುನ್ಸೂಚನೆ: ಭಾರೀ ಸಂಖ್ಯೆಯಲ್ಲಿ ಜನರ ಸ್ಥಳಾಂತರ

ಮುಂಬೈ: ನಿಸರ್ಗ ಚಂಡಮಾರುತ ಮುಂಬೈ ಮಹಾ ನಗರವನ್ನು ಸಮೀಪಿಸುತ್ತಿದ್ದು ಮಧ್ಯಾಹ್ನ 1ರಿಂದ 4 ಗಂಟೆ ಮಧ್ಯೆ  ಹರಿಹರೇಶ್ವರ ಮತ್ತು ದಮನ್ ಮಧ್ಯೆ ಹಾದು ಹೋಗಲಿದೆ. ಇದು ಆಲಿಭಾಗ್ ಗೆ ಅತೀ ಸಮೀಪದಲ್ಲಿ ಮುಂದಕ್ಕೆ ತೆರಳಲಿದೆ. ಚಂಡಮಾರುತದ ಪರಿಣಾಮ ಮುಂಬೈ ಮಹಾನಗರ ಸೇರಿದಂತೆ ರಾಜ್ಯದ ಕೊಂಕಣ ತೀರ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಯಾವುದೇ ಸಂಭಾವ್ಯ ಪರಿಸ್ಥಿತಿ ಎದುರಿಸಲು ಮುಂಬೈ ಮಹಾನಗರದಲ್ಲಿ ನೌಕಾಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಈ ಮಧ್ಯೆ ತಗ್ಗು ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದ್ದು, ವರ್ಸೋವಾದಲ್ಲಿ 50000ಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಕರೆದೊಯ್ಯಲಾಗಿದೆ. ಚಂಡಮಾರುತದ ಪರಿಣಾಮ ರತ್ನಗಿರಿ, ಸಿಂಧು ದುರ್ಗ,ಫಾಲ್ಗಾರ್ ಜಿಲ್ಲೆಯಲ್ಲಿ ಗಂಟೆಗೆ 90 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಇಂದು ಮಧ್ಯರಾತ್ರಿಯ ಬಳಿಕ ನಿಸರ್ಗ ಚಂಡಮಾರುತ ದುರ್ಬಲವಾಗಲಿದೆ

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!