Monday, April 12, 2021

ಭಾರತಕ್ಕೆ ಮಲ್ಯ ಕರೆತರಲು ಕಾನೂನು ಪ್ರಕ್ರಿಯೆ ಆರಂಭ

ಲಂಡನ್/ ನವದೆಹಲಿ: ಭಾರತಕ್ಕೆ ಬಹುಕೋಟಿ ವಂಚನೆ ಎಸಗಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರನ್ನು ತವರಿಗೆ ಕರೆತರುವ ಪ್ರಯತ್ನಗಳು ಆರಂಭಗೊಂಡಿದ್ದು, ಸಿಬಿಐ ಮತ್ತು ಇಡಿ ಈ ನಿಟ್ಟಿನಲ್ಲಿ ಕಾನೂನು ಪ್ರಕ್ರಿಯೆ ಆರಂಭಿಸಿದೆ.
ಸದ್ಯ ಯುಕೆಯಲ್ಲಿರುವ ವಿಜಯ್ ಮಲ್ಯ ತಮ್ಮನ್ನು ಭಾರತಕ್ಕೆ ಹಸ್ತಾಂತರಿಸುವುದರ ವಿರುದ್ಧ ಯುಕೆ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಆದರೇ ಅವರ ಎಲ್ಲ ಅರ್ಜಿಗಳು ವಜಾಗೊಂಡಿದೆ. ಹೀಗಾಗಿ ಸಿಬಿಐ ಹಾಗೂ ಇಡಿ ಐಎಎನ್ ಎಸ್ ಜೊತೆ ಮಾತುಕತೆ ಆರಂಭಿಸಿದ್ದು ಮಲ್ಯರನ್ನು ಭಾರತಕ್ಕೆ ಕರೆತರುವ ಸಿದ್ಧತೆ ನಡೆದಿದೆ. ಆದರೇ ನಿರ್ದಿಷ್ಟವಾದ ದಿನಾಂಕವನ್ನು ತನಿಖಾ ತಂಡಗಳು ನೀಡಿಲ್ಲ.
ಕಿಂಗ್ ಪಿಶರ್ ಏರ್ ಲೈನ್ಸ್ ಆರಂಭಿಸಿದ್ದ ಮಲ್ಯ ಭಾರತದ ಹಲವು ಬ್ಯಾಂಕ್ ಗಳಿಗೆ ಸುಮಾರು 9 ಸಾವಿರ ಕೋಟಿ ರೂಪಾಯಿ ವಂಚನೆ ಎಸಗಿದ್ದು 2016 ರಲ್ಲಿ ದೇಶ ಬಿಟ್ಟು ಪರಾರಿಯಾಗಿದ್ದರು.
2017 ರಿಂದ ಸಿಬಿಐ ಮಲ್ಯ ವಿರುದ್ಧ ತನಿಖೆ ಆರಂಭಿಸಿದ್ದು ಮೋಸ, ವಂಚನೆ, ಕ್ರಿಮಿನಲ್ ಪಿತೂರಿ ಸೇರಿದಂತೆ ಹಲವು ‌ಪ್ರಕರಣಗಳನ್ನು ದಾಖಲಿಸಿಕೊಂಡಿದೆ. ಪ್ರಮುಖವಾಗಿ ಐಡಿಬಿಐ ಬ್ಯಾಂಕ್ ಗೆ 900 ಕೋಟಿ ರೂಪಾಯಿ ವಂಚಿಸಿದ ಆರೋಪವಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!