ತಿರುವನಂತಪುರಂ:ಕೇರಳದಲ್ಲಿ ಆಡಳಿತಾರೂಢ ಸಿಪಿಐ (ಎಂ) ನೇತೃತ್ವದ ಎಲ್ ಡಿಎಫ್ ಪಕ್ಷ ಭಾನುವಾರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ವಿರೋಧಿಸಿ 620 ಕಿಮೀ ಉದ್ದದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿತು.
ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಮತ್ತು ಸಿಪಿಐ ರಾಜ್ಯ ಕಾರ್ಯದರ್ಶಿ ಕಾನಮ್ ರಾಜೇಂದ್ರನ್ ಉಪಸ್ಥಿತರಿದ್ದರು. ಸುಮಾರು 70 ಲಕ್ಷ ಜನರು ಮಾನವ ಸರಪಳಿಯಲ್ಲಿ ಪಾಲ್ಗೊಂಡರು. ಕಾಸರಗೋಡಿನಿಂದ ಕಲಿಯಿಕ್ಕವಿಲಾದವರೆಗೆ ಮಾನವ ಸರಪಳಿ ನಿರ್ಮಿಸಲಾಗಿತ್ತು. ಇದು ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಮಾನವ ಸರಪಳಿ ಎಂದು ಗುರುತಿಸಿಕೊಂಡಿತು.
ಯುಎನ್ಐ ಎಸ್ಎಚ್ 2130