Wednesday, October 5, 2022

ಕೊಲ್ಕತ್ತಾದಲ್ಲಿ ಲಷ್ಕರ್ ಎ ತೊಯ್ಯಬಾ ಉಗ್ರನ ಬಂಧನ

Follow Us

Newsics.com

ಕೊಲ್ಕತ್ತಾ:  ಭಯೋತ್ಪಾದನಾ ನಿಗ್ರಹ ದಳ ಕೊಲ್ಕತ್ತಾದಲ್ಲಿ  ಲಷ್ಕರ್ ಎ ತಯ್ಯಬಾ ಉಗ್ರ ಸಂಘಟನೆಗೆ ಸೇರಿದ ಸದಸ್ಯನೊಬ್ಬನನ್ನು ಬಂಧಿಸಿದೆ. ಖಚಿತ ಮಾಹಿತಿ ಮೇರೆಗೆ ನಡೆಸಲಾದ ಶೋಧ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯ ಬಗ್ಗೆ ಹೆಚ್ಚಿನ ಮಾಹಿತಿ ಬಿಡುಗಡೆಮಾಡಿಲ್ಲ.

ದೀಪಾವಳಿ ಸಂದರ್ಭದಲ್ಲಿ ದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಈ ಉಗ್ರ ಸಂಘಟನೆ ಸಂಚು ಹೂಡಿತ್ತು ಎಂದು ಹೇಳಲಾಗುತ್ತಿದೆ.

ಕಳೆದ ತಿಂಗಳು ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ್ದ ರಾಷ್ಟ್ರೀಯ ತನಿಖಾದಳ ಮೂರು ಶಂಕಿತ ಭಯೋತ್ಪಾದಕರನ್ನು ಬಂಧಿಸಿತ್ತು.

ಇದೇ ವೇಳೆ ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನದ ಪುಂಡಾಟ ಮುಂದುವರಿದಿದೆ. ಇಂದು ಕೂಡ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ. ಇದಕ್ಕೆ ಭಾರತದ ಯೋಧರು ದಿಟ್ಟ ಪ್ರತ್ಯುತ್ತರ ನೀಡಿದ್ದಾರೆ.

ಸುದ್ದಿ ಜಾಲ ತಾಣ –ಒಟಿಟಿ ಸೇವೆ ಮೇಲೆ ಸರ್ಕಾರದ ನಿಯಂತ್ರಣ

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!