Monday, April 12, 2021

ದೇಶದಲ್ಲಿ ಲಾಕ್ ಡೌನ್ ಮತ್ತೆ ಎರಡು ವಾರ ವಿಸ್ತರಣೆ ಸಾಧ್ಯತೆ

ನವದೆಹಲಿ:  ದೇಶದಲ್ಲಿ ಲಾಕ್ ಡೌನ್ ಐದನೆ ಹಂತ ಪ್ರವೇಶಿಸುವ ಸಾಧ್ಯತೆ ಹೆಚ್ಚಾಗಿದೆ. ಜೂನ್ ಒಂದರಿಂದ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. ಈ ಅವಧಿಯ ಲಾಕ್ ಡೌನ್ ನಲ್ಲಿ ಭಾರಿ  ವಿನಾಯಿತಿಗಳನ್ನು ಕೇಂದ್ರ ಸರ್ಕಾರ  ನೀಡಲಿದೆ. ಆದರೂ ಕೆಲವೊಂದು ನಿರ್ಬಂಧ ಮುಂದುವರಿಯಲಿದೆ. ಮುಖ್ಯವಾಗಿ ಶೇಕಡ 70 ಕೊರೋನಾ ಪ್ರಕರಣ ವರದಿಯಾಗಿರುವ ದೇಶದ 11 ಬೃಹತ್ ನಗರಗಳನ್ನು ಕೇಂದ್ರೀಕರಿಸಿ ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಮುಂದಾಗಿದೆ.  ಇದರಲ್ಲಿ ಬೆಂಗಳೂರು ಕೂಡ ಸೇರಿದೆ.  ಮುಂಬೈ, ಕೊಲ್ಕತ್ತಾ, ದೆಹಲಿ, ಚೆನ್ನೈ, ಅಹ್ಮದಾಬಾದ್, ಪುಣೆ, ಥಾಣೆ, ಜೈಪುರ ಮತ್ತು ಇಂಧೋರ್ ನಲ್ಲಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಲಾಕ್ ಡೌನ್ 5.0ದಲ್ಲಿ ಪ್ರಾರ್ಥನಾ ಮಂದಿರಗಳ ಬಾಗಿಲು ತೆರೆಯುವ ಸಾಧ್ಯತೆ ಹೆಚ್ಚಾಗಿದೆ. ಆದರೆ ಅಲ್ಲಿ ಧಾರ್ಮಿಕ ಸಮಾವೇಶ, ಉತ್ಸವ ಆಚರಣೆ ನಿಷೇಧ ಮುಂದುವರಿಯಲಿದೆ. ಸ್ಪೂರ್ತಿಯ ನೆಲೆಯಲ್ಲಿ ಲಾಕ್ ಡೌನ್ ಎಂಬ ಕಲ್ಪನೆಯನ್ನು  ಕೇಂದ್ರ ಸರ್ಕಾರ ಜನರ ಮುಂದಿಡಲಿದೆ. ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಂದುವರೆ ಲಕ್ಷ ದಾಟಿರುವ ಹಿನ್ನೆಲೆಯಲ್ಲಿ ಅವಸರದ ತೀರ್ಮಾನ ತೆಗೆದುಕೊಳ್ಳದಿರಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಆದರೆ ದೇಶದಲ್ಲಿ ಮಾಲ್, ಮತ್ತು ಶಾಲೆಗಳ ಪುನಾರಾರಂಭ  ಸಾಧ್ಯತೆ ಲಾಕ್ ಡೌನ್ 5 ಹಂತದಲ್ಲಿಯೂ  ಕ್ಷೀಣಿಸಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!