Monday, November 29, 2021

ಲಾಕ್ ಡೌನ್: ಮದ್ಯ ಸಿಗದ್ದಕ್ಕೆ 9 ಮಂದಿ ಸಾವು

Follow Us

ತಿರುವನಂತಪುರ: ಕೊರೋನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿರುವುದರಿಂದ ಮದ್ಯ ದೊರೆಯದೆ ಕೇರಳ ರಾಜ್ಯದಲ್ಲಿ 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಈ ಪೈಕಿ ಏಳು ಮಂದಿ ಮದ್ಯ ದೊರೆಯದೆ ಇದ್ದುದಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇನ್ನೋರ್ವ ತೀವ್ರ ಮದ್ಯಪಾನ ವ್ಯಸನಿಯಾಗಿದ್ದು, ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಇನ್ನೋರ್ವ ಶೇವಿಂಗ್ ನಂತರ ಮುಖಕ್ಕೆ ಲೇಪಿಸುವ ಲೋಶನ್ ಕುಡಿದು ಸಾವಿಗೀಡಾಗಿದ್ದಾನೆ.
ಕೇರಳದಲ್ಲಿ ಕೊರೋನಾ ವೈರಸ್ ಸೋಂಕಿನಿಂದ ಈವರೆಗೆ 200 ಸೋಂಕು ಪ್ರಕರಣಗಳು ವರದಿ ಆಗಿದ್ದು ಓರ್ವ ಮೃತಪಟ್ಟಿದ್ದಾನೆ. ಮದ್ಯ ಸಿಗಲಿಲ್ಲ ಎಂಬ ಕಾರಣಕ್ಕೆ ಕೊಟ್ಟಾಯಂಲ್ಲಿ 46 ವರ್ಷ ವಯಸ್ಸಿನ ವ್ಯಕ್ತಿಯೊಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...

ಬಹುಕಾಲದ ಗೆಳತಿಯೊಂದಿಗೆ ಶಾರ್ದುಲ್ ಠಾಕೂರ್ ನಿಶ್ಚಿತಾರ್ಥ

newsics.com ಮುಂಬೈ: ಕ್ರಿಕೆಟಿಗ ಶಾರ್ದೂಲ್ ಠಾಕೂರ್ ತಮ್ಮ ಬಹುಕಾಲದ ಗೆಳತಿ ಮಿತ್ತಾಲಿ ಪಾರುಲ್ಕರ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಸರಳವಾಗಿ ನಡೆದ ಅವರ ನಿಶ್ಚಿತಾರ್ಥ ಸಮಾರಂಭದಲ್ಲಿ ಸುಮಾರು 75 ಜನರು ಭಾಗವಹಿಸಿದ್ದರು...
- Advertisement -
error: Content is protected !!