ಚೆನ್ನೈ: ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ರಾಜ್ಯ ಸರ್ಕಾರ ಆ.31ರವರೆಗೆ ಲಾಕ್ಡೌನ್ ವಿಸ್ತರಿಸಿದೆ.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಸಾರ್ವಜನಿಕ ಆರೋಗ್ಯ ತಜ್ಞರ ಅಬಿಪ್ರಾಯಗಳ ಆಧಾರದ ಮೇಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ತಿಳಿಸಿದ್ದಾರೆ. ಈ ಹಿಂದೆ ನೀಡಿದ್ದ ವಿನಾಯ್ತಿ ಮತ್ತು ನಿರ್ಬಂಧಗಳಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.
ಈವರೆಗೆ ಲಾಕ್ಡೌನ್ ಜಾರಿಯಿರುವ ಪ್ರದೇಶಗಳಲ್ಲಿ ಆಗಸ್ಟ್ ಅಂತ್ಯದವರೆಗೆ ಸಂಪೂರ್ಣ ಲಾಕ್ಡೌನ್ ಇರಲಿದ್ದು, ಭಾನುವಾರ ಕೂಡ ವಿನಾಯ್ತಿ ಇಲ್ಲ. ಇತರ ಜಿಲ್ಲೆಗಳಲ್ಲಿ ಸದ್ಯ ಇರುವ ನಿರ್ಬಂಧಗಳೇ ಮುಂದುವರಿಯಲಿದೆ, ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ತಮಿಳುನಾಡಲ್ಲಿ ಆ.31ರವರೆಗೂ ಲಾಕ್ ಡೌನ್
Follow Us