newsics.com
ಮುಂಬೈ/ಚೆನ್ನೈ: ಕೊರೋನಾ ಸೋಂಕು ವ್ಯಾಪಕವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಅ.31 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.
ಮಹಾರಾಷ್ಟ್ರದಲ್ಲಿ ಇದುವರೆಗೆ 2,60,789 ಪ್ರಕರಣ ದಾಖಲಾಗಿದ್ದು, ಇದುವರೆಗೆ 36,181 ಜನರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಮಹಾರಾಷ್ಟ್ರ ರಾಜ್ಯಾದ್ಯಂತ ಅ.31 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದ್ದು, ಅಕ್ಟೋಬರ್ 5 ರಿಂದ ಹೋಟೆಲ್, ಫುಡ್ ಕೋರ್ಟ್, ರೆಸ್ಟೋರೆಂಟ್ ಹಾಗೂ ಬಾರ್ ಗಳು ಶೇ.50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.
ತಮಿಳುನಾಡಿನಲ್ಲಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಲಾಕ್ಡೌನ್ ವಿಸ್ತರಣೆ ಮಾಡಿರುವ ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ, ಸ್ವಲ್ಪ ಮಟ್ಟಿಗೆ ನಿರ್ಬಂಧಗಳನ್ನು ಸಡಿಲಿಸಿ, ಲಾಕ್ಡೌನ್ ವಿಸ್ತರಣೆ ಮಾಡಿದ್ದಾರೆ. ಕಂಟೇನ್ಮೆಂಟ್ ವಲಯಗಳಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಇರಲಿದೆ. ಸೆಕ್ಷನ್ 144 ಕೂಡ ಮುಂದುವರಿಯಲಿದೆ. ಉಳಿದ ಪ್ರದೇಶಗಳಲ್ಲಿ ನಿರ್ಬಂಧಗಳಲ್ಲಿ ಮತ್ತಷ್ಟು ಸಡಿಲಿಕೆ ಮಾಡಲಾಗುವುದು ಎಂದು ಪಳನಿಸ್ವಾಮಿ ತಿಳಿಸಿದ್ದಾರೆ. ಸಿನಿಮಾ ಶೂಟಿಂಗ್ ಮುಂದುವರಿಸಬಹುದು. ಆದರೆ 100 ಜನರು ಮಾತ್ರ ಸ್ಥಳದಲ್ಲಿ ಇರಬೇಕು. ಸಣ್ಣಪುಟ್ಟ ಹೋಟೆಲ್ಗಳು, ರೆಸ್ಟೋರೆಂಟ್ಗಳು ಬೆಳಗ್ಗೆ 6ರಿಂದ ರಾತ್ರಿ 9ರವರೆಗೆ ಮಾತ್ರ ಕಾರ್ಯನಿರ್ವಹಿಸಬೇಕು ಎಂದೂ ಹೇಳಿದ್ದಾರೆ.
ಮಹಾರಾಷ್ಟ್ರ, ತಮಿಳುನಾಡಲ್ಲಿ ಅ.31ರವರೆಗೆ ಲಾಕ್ ಡೌನ್ ವಿಸ್ತರಣೆ
Follow Us