Tuesday, April 13, 2021

ಅರಬ್ಬಿ ಸಮುದ್ರದಲ್ಲಿ ವಾಯು ಭಾರ ಕುಸಿತ- ಚಂಡಮಾರುತದ ಮುನ್ಸೂಚನೆ

ಕೊಚ್ಚಿ:  ಅರಬಿ ಸಮುದ್ರದಲ್ಲಿ ವಾಯು ಭಾರ ಕುಸಿತ ಸಂಭವಿಸಿದ್ದು, ಚಂಡಮಾರುತದ ಸಾಧ್ಯತೆ ಹೆಚ್ಚಾಗಿದೆ. ಮೇ 31ರಂದು ಇದು ದೇಶದ  ಪಶ್ಚಿಮ ಕರಾವಳಿ ತೀರಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಅಂಫಾನ್ ಚಂಡುಮಾರುತದಷ್ಟು ಶಕ್ತಿ ಇರದಿದ್ದರೂ ಚಂಡ ಮಾರುತದ ಪರಿಣಾಮ ಕರಾವಳಿ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಕೇರಳದ ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮೀನುಗಾರರು ಸಮುದ್ರದಿಂದ ದಡಕ್ಕೆ ಬರುವಂತೆ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ಕರಾವಳಿಯಲ್ಲಿ ಚಂಡ ಮಾರುತದ ಪರಿಣಾಮ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಗುಜರಾತ್ ನಲ್ಲಿ ಕೂಡ ವರ್ಷಧಾರೆ ಆಗಲಿದೆ.  ದೇಶಕ್ಕೆ ಮುಂಗಾರು ಆಗಮನಕ್ಕೆ ಕ್ಷಣಗಣನೆ ಆರಂಭವಾಗಿರುವ ಈ ಹಂತದಲ್ಲಿ ಚಂಡಮಾರುತ ಸೃಷ್ಟಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಮುಂಗಾರು ಮಳೆಯ ಮೇಲೂ ಇದು ಪರಿಣಾಮ ಬೀರುತ್ತಿದೆ. ಇದೇ ವೇಳೆ ಅಂಫಾನ್ ಚಂಡ ಮಾರುತದ ಪರಿಣಾಮ ಅಸ್ಸಾಂನಲ್ಲಿ ಈಗಲೂ ಮಳೆ ಸುರಿಯುತ್ತಿದೆ.  ಗೋಲಾಪುರ ಜಿಲ್ಲೆಯಲ್ಲಿ ಮಳೆಯಿಂದ ವ್ಯಾಪಕ ಹಾನಿ ಸಂಭವಿಸಿದೆ. ಮೂರು ಲಕ್ಷ ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ  ಸ್ಥಳಾಂತರಿಸಲಾಗಿದೆ

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...
- Advertisement -
error: Content is protected !!