newsics.com
ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಅವರು ದೇಶದ ಮುಂದಿನ ಚೀಫ್ ಆಫ್ ಡಿಫೆನ್ಸ್ ಅಥವಾ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಅಧಿಕಾರ ವಹಿಸಿಕೊಂಡ ದಿನದಿಂದ ಮಿಲಿಟರಿ ವ್ಯವಹಾರಗಳ ಇಲಾಖೆಯ ಕೇಂದ್ರ ಸರ್ಕಾರದ ಕಾರ್ಯದರ್ಶಿಯಾಗಿಯೂ ಕಾರ್ಯ ನಿರ್ವಹಣೆ ಮಾಡಲಿದ್ದಾರೆ. ಮುಂದಿನ ಆದೇಶದವರೆಗೂ ಅವರು ಈ ಎರಡು ಸ್ಥಾನಗಳಲ್ಲಿ ಇರಲಿದ್ದಾರೆ ಎಂದು ತಿಳಿಸಿದ್ದಾರೆ.
ಸುಮಾರು 40 ವರ್ಷಗಳ ವೃತ್ತಿಜೀವನದಲ್ಲಿ, ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಅವರು ಹಲವಾರು ಕಮಾಂಡ್, ಸಿಬ್ಬಂದಿ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಿದ್ದರು. ಅದಲ್ಲದೆ, ಜಮ್ಮು ಮತ್ತು ಕಾಶ್ಮೀರ ಹಾಗೂ ಈಶಾನ್ಯ ಭಾರತದಲ್ಲಿ ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಯನ್ನೂ ನಡೆಸುವ ಮೂಲಕ ಈ ಭಾಗದ ಗರಿಷ್ಠ ಅನುಭವವನ್ನು ಹೊಂದಿದ್ದಾರೆ.