Thursday, December 7, 2023

ತಮಿಳು ನಟ ಸೂರ್ಯ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ಕೈಬಿಟ್ಟ ಮದ್ರಾಸ್ ಹೈಕೋರ್ಟ್

Follow Us

newsics.com
ಚೆನ್ನೈ: ನೀಟ್ ಪರೀಕ್ಷೆಗೆ ಅನುಮತಿ ನೀಡಿದ ಸುಪ್ರೀಂ ಕೋರ್ಟ್ ನಿರ್ಧಾರ ಟೀಕಿಸಿದ್ದ ತಮಿಳು ನಟ ಸೂರ್ಯ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ಕೈಬಿಟ್ಟಿದೆ.
ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ನಟ ಸೂರ್ಯ ನೀಡಿದ್ದ ಹೇಳಿಕೆ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕೆಂದು ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ಎಸ್.ಎಂ. ಸುಬ್ರಮಣಿಯಂ ಅವರು ಮುಖ್ಯ ನ್ಯಾಯಮೂರ್ತಿ ಅಮರೇಶ್ವರ ಪ್ರತಾಪ್ ಸಾಹಿಗೆ ಪತ್ರ ಬರೆದಿದ್ದರು.
29 ಪುಟಗಳ ಆದೇಶದಲ್ಲಿ, ಅಡ್ವೋಕೇಟ್ ಜನರಲ್ ವಿಜಯ್ ನಾರಾಯಣ್ ಅವರ ಅಭಿಪ್ರಾಯಕ್ಕೆ ನ್ಯಾಯಪೀಠ ಒಪ್ಪಿಗೆ ನೀಡಿದ್ದು, ನಟನ ವಿರುದ್ಧ ಕ್ರಿಮಿನಲ್ ವಿಚಾರಣೆಗೆ ಒಪ್ಪಿಗೆ ನೀಡಲು ನಿರಾಕರಿಸಿದೆ.
ತಮಿಳುನಾಡಿನಲ್ಲಿ ನಾಲ್ವರು ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡ ಕುಟುಂಬಗಳ ವಿದ್ಯಾರ್ಥಿಗಳ ಕನಸುಗಳನ್ನು ಕಿತ್ತು ಹಾಕುತ್ತಿರುವ ನೀಟ್ ಪರೀಕ್ಷೆಯನ್ನು ಶಾಶ್ವತವಾಗಿ ರದ್ದುಗೊಳಿಸಿ ಎಂದು ನಟ ಸೂರ್ಯ ಸರ್ಕಾರವನ್ನು ಒತ್ತಾಯಪಡಿಸಿದ್ದರು. ನೀಟ್ ಪರೀಕ್ಷೆಯನ್ನು ತೆಗೆದುಹಾಕುವ ಸಂಬಂಧ ಇದಕ್ಕೆ ಸಂಬಂಧಪಟ್ಟವರೆಲ್ಲರೂ ಧ್ವನಿಯೆತ್ತಬೇಕು ಎಂದು ನಟ ಒತ್ತಾಯಿಸಿದ್ದರು.
ನ್ಯಾಯಾಲಯದ ಕಾರ್ಯವೈಖರಿ ಬಗ್ಗೆ ಕೂಡ ಮಾತನಾಡಿದ್ದು, ಕೋವಿಡ್-19 ಸಾಂಕ್ರಾಮಿಕ ರೋಗದ ಭಯದಲ್ಲಿ ನ್ಯಾಯಾಲಯಗಳು ವರ್ಚುವಲ್ ವಿಚಾರಣೆ ಮೂಲಕ ನ್ಯಾಯ ವಿಲೇವಾರಿ ಮಾಡುತ್ತಿವೆ, ಆದರೆ ವಿದ್ಯಾರ್ಥಿಗಳಿಗೆ ಮಾತ್ರ ಯಾವುದೇ ಭಯವಿಲ್ಲದೆ ನೀಟ್ ಪರೀಕ್ಷೆಯನ್ನು ಪರೀಕ್ಷಾ ಕೇಂದ್ರಗಳಿಗೆ ಹೋಗಿ ಬರೆಯಿರಿ ಎಂದು ಹೇಳುತ್ತಿರುವುದು ಎಷ್ಟು ಸರಿ ಎಂದು ನಟ ಸೂರ್ಯ ಪ್ರಶ್ನಿಸಿದ್ದರು.

ರಾಜ್ಯದಲ್ಲಿ ಸೆ.21ರಿಂದ ಶಾಲೆ ಮಾತ್ರ ಓಪನ್, ಕ್ಲಾಸ್ ಇರಲ್ಲ

ಪ್ರಧಾನಿ ಮೋದಿ ಮನಗೆದ್ದ ಸುಳ್ಯದ ಯುವಕನ ಬರ್ತ್ ಡೇ ಗಿಫ್ಟ್

ಗೂಗಲ್ ಪ್ಲೇ ಸ್ಟೋರ್’ನಿಂದ ಪೇಟಿಎಂ ಮಾಯ..!

ಮತ್ತಷ್ಟು ಸುದ್ದಿಗಳು

vertical

Latest News

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಪೊಲೀಸ್ ವಶಕ್ಕೆ

Newsics.com ಕಲಬುರಗಿ : ಅಪಘಾತವನ್ನು ಕೊಲೆ ಯತ್ನ ಎಂದು ಕಥೆ ಕಟ್ಟಿದ್ದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ರನ್ನ ನಗರ ಠಾಣೆಯ ಪೊಲೀಸರು ಮತ್ತೆ ವಶಕ್ಕೆ...

ನಂದಿನಿ ಹಾಲಿನ ದರ ಮತ್ತೆ ಏರಿಕೆ..!!

Newsics.com ಬೆಂಗಳೂರು :  ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ಕಾದಿದೆ. ಹೌದು, ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ. ಈ ಕುರಿತು ಜನವರಿಯಲ್ಲಿ...

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಮೃತ ವೈದ್ಯಳನ್ನು...
- Advertisement -
error: Content is protected !!