ನವದೆಹಲಿ: ದೇಶಾದ್ಯಂತ ಮಾಘ ಹುಣ್ಣಿಮೆ ಸಂಭ್ರಮ. ಈ ಹಿನ್ನೆಲೆಯಲ್ಲಿ ಭಕ್ತರು ನದಿಗಳಲ್ಲಿ ಪವಿತ್ರ ಸ್ನಾನ ಮಾಡಿದರು. ಮುಖ್ಯವಾಗಿ ಉತ್ತರ ಭಾರತದಲ್ಲಿ ವಾರಣಾಸಿ ಮತ್ತು ಇತರ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪುಣ್ಯ ಸ್ನಾನ ಮಾಡಿದರು. ಮಾಘ ಹುಣ್ಣಿಮೆಯಂದು ನದಿಯಲ್ಲಿ ಸ್ನಾನ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ.