newsics.com
ಮುಂಬೈ: ಉತ್ತರಪ್ರದೇಶದ ಲಖೀಂಪುರದಲ್ಲಿ ನಡೆದ ಹಿಂಸಾಚಾರದಲ್ಲಿ ರೈತರು ಮೃತಪಟ್ಟಿರುವುದನ್ನು ಖಂಡಿಸಿ ಮಹಾರಾಷ್ಟ್ರದಲ್ಲಿ ಬಂದ್ ಗೆ ಕರೆ ನೀಡಲಾಗಿದೆ.
ಆಡಳಿತಾರೂಢ ಶಿವಸೇನೆ ಇಂದಿನ ಬಂದ್ ಕರೆಗೆ ಬೆಂಬಲ ಸೂಚಿಸಿರುವ ಹಿನ್ನೆಲೆಯಲ್ಲಿ ಸಾರಿಗೆ ವ್ಯವಸ್ಥೆ ಸ್ಥಗಿತಗೊಂಡಿದೆ.
ಬಸ್ ಸಂಚಾರ ಸ್ಥಗಿತಗೊಂಡಿದೆ. ಅಂಗಡಿಗಳು ಮುಚ್ಚಿವೆ.
ಬಂದ್ ಹಿನ್ನೆಲೆಯಲ್ಲಿ ಮುಂಬೈ ನಗರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಈ ಮಧ್ಯೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ ಮಿಶ್ರಾ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆಗ್ರಹಿಸಿದ್ದಾರೆ