Sunday, July 3, 2022

ಕೊರೋನಾಗೆ ಮಾಜಿ ಸಿಎಂ ಬಲಿ

Follow Us

ಪುಣೆ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶಿವಾಜಿರಾವ್ ಪಾಟೀಲ್ ನೀಲಂಗೇಕರ್ (89) ಬುಧವಾರ ನಿಧನರಾದರು.
ಶಿವಾಜಿರಾವ್ ಅವರು ಹೃದ್ರೋಗ ಹಾಗೂ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಅವರಿಗೆ ಕೊರೋನಾ ಸೋಂಕು ತಗುಲಿತ್ತು. ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ ಕೊನೆಯುಸಿರೆಳೆದರು ಎಂದು ಅವರಿಗೆ ಚಿಕಿತ್ಸೆ ನೀಡುತ್ತಿದ್ದ ಪುಣೆ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಜುಲೈನಲ್ಲೆ ಶಿವಾಜಿರಾವ್‌ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಈ ಸಂಬಂಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು. ಮರಾಠವಾಡ ಪ್ರದೇಶದ ಲಾತೂರ್‌ನ ಹಿರಿಯ ಕಾಂಗ್ರೆಸ್‌ ಮುಖಂಡ ನೀಂಗೇಕರ್ ಅವರು ಜೂನ್ 1985 ರಿಂದ ಮಾರ್ಚ್‌ 1986ರವರೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದರು. ವೈದ್ಯಕೀಯ ಪರೀಕ್ಷೆ ಹಗರಣದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ 1985ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!