Tuesday, April 13, 2021

50 ವಿಮಾನಗಳ ಆಗಮನ, ನಿರ್ಗಮನಕ್ಕೆ ಮಹಾರಾಷ್ಟ್ರ ಸಮ್ಮತಿ

ಮುಂಬೈ: 25 ವಿಮಾನಗಳ ಆಗಮನ ಹಾಗೂ ಅಲ್ಲಿಂದ 25 ವಿಮಾನಗಳ ಹಾರಾಟಕ್ಕೆ ಮಹಾರಾಷ್ಟ್ರ ಸರ್ಕಾರ ಅನುಮತಿ ನೀಡಿದೆ.
ಮೇ 25ರಿಂದ ದೇಶೀಯ ವಿಮಾನಗಳ ಸೇವೆ ಆರಂಭವಾಗಲಿದೆ. ಕೇಂದ್ರದ ಈ ನಿರ್ಧಾರಕ್ಕೆ ಮೊದಲು ತೀವ್ರ ವಿರೋಧ ವ್ಯಕ್ತಪಡಿಸಿದ್ದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕೇಂದ್ರ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಜತೆ ಮಾತುಕತೆ ನಡೆಸಿದ ಬಳಿಕ ವಿಮಾನ ಹಾರಾಟಕ್ಕೆ ಸಮ್ಮತಿಸಿದ್ದಾರೆ.
ತಮಿಳುನಾಡು, ಪಶ್ಚಿಮ ಬಂಗಾಳ ಸರ್ಕಾರಗಳು ಕೂಡ ವಿಮಾನ ಹಾರಾಟದ ವಿರುದ್ಧ ದನಿ ಎತ್ತಿದ್ದವು.
ಲಾಕ್ ಡೌನ್ ತೆರವಿಗೆ ಠಾಕ್ರೆ ವಿರೋಧ:
ಈ ಮಧ್ಯೆ, ಲಾಕ್ ಡೌನ್ ಸಡಿಲಿಕೆ ಬಗ್ಗೆ ಕೇಂದ್ರದ ನಿರ್ಧಾರವನ್ನು ಟೀಕಿಸಿರುವ ಉದ್ಧವ್ ಠಾಕ್ರೆ, ಇದಕ್ಕಿದ್ದಂತೆ ಲಾಕ್ ಡೌನ್ ಹೇರುವುದು, ಒಂದೇ ಬಾರಿಗೆ ಅದನ್ನು ತೆರವುಗೊಳಿಸುವುದು ತಪ್ಪು ಎಂದಿದ್ದಾರೆ.
ಮುಂಬರುವ ಮಳೆಗಾಲದ ಅವಧಿಯಲ್ಲಿ ಹೆಚ್ಚಿನ ಮುಂಜಾಗ್ರತೆ ವಹಿಸಬೇಕಾದ ಅಗತ್ಯವಿದೆ. ಕೇಂದ್ರದ ನಿರ್ಧಾರ ಮಹಾರಾಷ್ಟ್ರದ ಜನತೆಗೆ ಹಿತಕರವಾಗಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!