newsics.com
ಪುಣೆ: ಮಹರಾಷ್ಟ್ರದ ಪುಣೆ- ಅಹ್ಮದಾಬಾದ್ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ , ಕಾರು ಮತ್ತು ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಐವರು ಗಾಯಗೊಂಡಿದ್ದಾರೆ. ಇವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಪುಣೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಕಳೆದ ಹಲವು ದಿನಗಳಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚಿನ ಅಪಘಾತ ಸಂಭವಿಸುತ್ತಿದೆ ಎಂದು ಚಾಲಕರು ಆರೋಪಿಸಿದ್ದಾರೆ.