newsics.com
ಮುಂಬೈ: ವಾಣಿಜ್ಯ ರಾಜಧಾನಿ ಮುಂಬೈ ಮಹಾ ನಗರದಲ್ಲಿ ಭಾರೀ ಬೆಂಕಿ ಆಕಸ್ಮಿಕ ಸಂಭವಿಸಿದೆ. ದಕ್ಷಿಣ ಮುಂಬೈನ ತಾರ್ ದೇವ್ ನಲ್ಲಿರುವ ಭಾಟಿಯಾ ಆಸ್ಪತ್ರೆ ಸಮೀಪದಲ್ಲಿರುವ ಬೃಹತ್ ಕಟ್ಟಡದಲ್ಲಿ ಈ ದುರಂತ ನಡೆದಿದೆ.
20 ಮಹಡಿಗಳ ಕಟ್ಟಡ ಇದಾಗಿದೆ. 13 ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ನಿರತವಾಗಿವೆ.
ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಆ ಮಾರ್ಗದಲ್ಲಿ ಸಂಚಾರ ನಿಷೇಧಿಸಲಾಗಿದೆ. ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.