Monday, April 12, 2021

ಮಲ್ಯ ಹಸ್ತಾಂತರ ಪ್ರಕ್ರಿಯೆ ಪೂರ್ಣ, ಇಂದೇ ಮುಂಬೈಗೆ ಶಿಫ್ಟ್

ನವದೆಹಲಿ: ವಿಜಯ್ ಮಲ್ಯರನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗಳು ಇಂಗ್ಲೆಂಡ್’ನಲ್ಲಿ ಪೂರ್ಣಗೊಂಡಿದ್ದು, ಸಿಬಿಐ ಹಾಗೂ ಇಡಿ ಅಧಿಕಾರಿಗಳು ಯಾವುದೇ ಕ್ಷಣದಲ್ಲಾದರೂ ಮುಂಬೈಗೆ ಕರೆತರುವ ಸಾಧ್ಯತೆ ಇದೆ.
9 ಸಾವಿರ ಕೋಟಿ ವಂಚಕ ವಿಜಯ್ ಮಲ್ಯ ವಿರುದ್ಧ ಮುಂಬೈನಲ್ಲಿ ಪ್ರಕರಣ ದಾಖಲಾಗಿರುವುದರಿಂದ ಸಿಬಿಐ ಹಾಗೂ ಇಡಿ ಅಧಿಕಾರಿಗಳು ಮಲ್ಯರನ್ನು ಮೊದಲು ಮುಂಬೈಗೆ ಕರೆದುಕೊಂಡು ಬರಲಿದ್ದಾರೆ. ಈ ವೇಳೆ ಮಲ್ಯರ ಆರೋಗ್ಯ ಪರಿಶೀಲನೆಗೆ ವೈದ್ಯಕೀಯ ತಂಡವನ್ನು ನಿಯೋಜಿಸಲಾಗಿದೆ.
ಬುಧವಾರ ತಡರಾತ್ರಿ ಅಥವಾ ಗುರುವಾರ ಬೆಳಗ್ಗೆ ವಿಜಯ್ ಮಲ್ಯ ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ವಿಚಾರಣೆಗಾಗಿ ಸಿಬಿಐ ಅಧಿಕಾರಿಗಳು ತಮ್ಮ ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ಮುಂಬೈನ ಆರ್ಥರ್ ರೋಡ್ ನಲ್ಲಿರುವ ಜೈಲಿನ ಕೋಣೆಯಲ್ಲಿ ಇರಿಸುವುದಾಗಿ ಸಿಬಿಐ ಅಧಿಕಾರಿಗಳು ವಿಡಿಯೋ ಮಾಡಿ 2018ರ ಆಗಸ್ಟ್’ನಲ್ಲಿ ಯುಕೆ ನ್ಯಾಯಾಲಯಕ್ಕೆ ಕಳುಹಿಸಿದ್ದರು. ಈ ಜೈಲಿನಲ್ಲಿ ಮುಂಬೈ ದಾಳಿಕೋರ ಅಜ್ಮಲ್ ಕಸಬ್, ಅಬು ಸಲೀಂ, ಚೋಟಾ ರಾಜನ್, ಮುಸ್ತಫಾ ದೋಸಾ, ಪೀಟರ್ ಮುಖರ್ಜಿ ಮತ್ತು ವಿಪುಲ್ ಅಂಬಾನಿಯನ್ನು ಇರಿಸಲಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!