ಕೋಲ್ಕತಾ: ಕರ್ನಾಟಕದ ಮಂಗಳೂರಿನಲ್ಲಿ ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿ ಪ್ರತಿಭಟನೆ ವೇಳೆ ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರಿಹಾರ ನೀಡಿದ್ದಾರೆ.
ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರ ಕುಟುಂಬಕ್ಕೂ ತಲಾ ಐದು ಲಕ್ಷ ಪರಿಹಾರ ಘೋಷಿಸಿದ್ದಾರೆ.
ಮಮತಾ ಬ್ಯಾನರ್ಜಿಯವರ ಈ ನಡೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಕರ್ನಾಟಕ ಸರ್ಕಾರ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿತ್ತಾದರೂ, ಗೋಲಿಬಾರ್ ನಲ್ಲಿ ಮೃತರಾದವರು ಗಲಭೆಗೆ ಕಾರಣರಾಗಿದ್ದರು ಎಂಬುದನ್ನು ಸಾಬೀತುಪಡಿಸುವ ಸಿಸಿಟಿವಿ ದೃಶ್ಯಾವಳಿ ಪೊಲೀಸರಿಗೆ ಸಿಕ್ಕ ಹಿನ್ನೆಲೆಯಲ್ಲಿ ಸರ್ಕಾರ ಘೋಷಣೆ ಮಾಡಿದ್ದ ಪರಿಹಾರವನ್ನೂ ತಡೆಹಿಡಿದಿದೆ. ಆರೋಪ ಸಾಬೀತಾದರೆ ನಯಾಪೈಸೆ ಪರಿಹಾರವನ್ನೂ ನೀಡುವುದಿಲ್ಲ ಎಂದು ನಿನ್ನೆ ಮಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದರು.